Connect with us

Hi, what are you looking for?

ರಾಷ್ಟ್ರೀಯ

ನಮೀಬಿಯಾದಿಂದ ತಂದ 8 ಆಫ್ರಿಕನ್ ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟ ಪ್ರಧಾನಿ ಮೋದಿ; ದೇಶದ ಚರಿತ್ರೆಯಲ್ಲಿ ಐತಿಹಾಸಿಕ ದಿನ ಎಂದ ನಮೋ| VIDEO

3

ದೆಹಲಿ : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚಿರತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವೇ ರಾಷ್ಟ್ರೀಯ ಉದ್ಯಾನವನದಲ್ಲಿ ಇವುಗಳನ್ನು ಬಿಡಲಾಗಿದೆ.

ಈ ವೇಳೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಚರಿತ್ರೆಯಲ್ಲಿ ಇದು ಐತಿಹಾಸಿಕ ದಿನ ಎಂದು ಬಣ್ಣಿಸಿದರು.

1952ರ ನಂತರ ಭಾರತದಲ್ಲಿ ಚೀತಾಗಳು ನಶಿಸಿ ಹೋಗಿವೆ ಎಂಬ ಬೇಸರವಿತ್ತು. ಆದರೆ, ಇದೀಗ ನಾವು ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ಈ ಹೊತ್ತಿನಲ್ಲಿ ದೇಶಕ್ಕೆ ಮತ್ತೊಂದು ಹೊಸ ಶಕ್ತಿ ಬಂದಿದೆ ಎಂದಿದ್ದಾರೆ.

Advertisement. Scroll to continue reading.

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಈ ವಿಶೇಷ ಚೀತಾ ನೋಡಲು ಜನರು ತಾಳ್ಮೆಯ ಜೊತೆಗೆ ಮುಂದಿನ ಕೆಲ ತಿಂಗಳ ಕಾಲ ಕಾಯಬೇಕು. ಈ ಚೀತಾಗಳು ಈ ಪ್ರದೇಶದ ಬಗ್ಗೆ ಅರಿವಿಲ್ಲದೆ ಅತಿಥಿಗಳಾಗಿ ಆಗಮಿಸಿವೆ. ಅವು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳಲು, ತಮ್ಮ ಮನೆ ಮಾಡಿಕೊಳ್ಳಲು ಸಮಯ ನೀಡಬೇಕಾಗುತ್ತದೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದ್ದಾರೆ.

1952ರಲ್ಲಿ ಚೀತಾ ವಿನಾಶಗೊಂಡ ಪ್ರಾಣಿ ಎಂದು ಘೋಷಣೆ ಮಾಡಲಾಗಿತ್ತು. ಇದೊಂದು ದುರದೃಷ್ಟಕರ ಸಂಗತಿಯಾಗಿದ್ದು, ಇದಾದ ಅನೇಕ ದಶಕಗಳ ಕಾಲ ಅವುಗಳ ಪುನರ್ವಸತಿ ಮಾಡಲು ಯಾವುದೇ ಅರ್ಥಪೂರ್ಣ ಪ್ರಯತ್ನ ನಡೆಯಲಿಲ್ಲ. ಇದೀಗ ನಾವು ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮದಲ್ಲಿರುವಾಗಲೇ ಚಿರತೆಗಳ ಪುನರ್ವಸತಿ ಆಗಿದೆ. ದಶಕಗಳ ಹಿಂದೆ ಮುರಿದು ಹೋಗಿದ್ದ ಕೊಂಡಿ ಇದೀಗ ಮರು ಸಂಪರ್ಕ ಪಡೆದಂತಾಗಿದೆ ಎಂದರು.

ಬರೋಬ್ಬರಿ ದಶಕಗಳ ಬಳಿಕ ಚೀತಾಗಳು ನಮ್ಮ ನೆಲಕ್ಕೆ ಮರಳಿದ್ದು, ಭಾರತೀಯ ಚರಿತ್ರೆಯಲ್ಲಿ ಇದು ಐತಿಹಾಸಿಕ ದಿನ. ಈ ಸಂದರ್ಭದಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ನಾನು ಅಭಿನಂದಿಸುತ್ತೇನೆ. ಜೊತೆಗೆ ನಮೀಬಿಯಾ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ. ಅವರ ಸಹಾಯವಿಲ್ಲದೇ ಈ ಯೋಜನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!