Connect with us

Hi, what are you looking for?

ರಾಜ್ಯ

ಹೆದ್ದಾರಿಯಿಂದ ಹೊಟೇಲ್‌ಗೆ ನುಗ್ಗಿದ ಕ್ಯಾಂಟರ್; ತಾಯಿ ಗರ್ಭದಲ್ಲಿದ್ದ ಶಿಶು ಸೇರಿ ಮೂವರು ಸಾವು

3

ಚಿಕ್ಕಬಳ್ಳಾಪುರ: ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಗರ್ಭದಲ್ಲಿದ್ದ ಕಂದಮ್ಮ ಸೇರಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.

ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಸಾವನ್ನಪ್ಪಿದವರು.

ಗಾಯಗೊಂಡ ನಾಲ್ವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisement. Scroll to continue reading.

ಅಡ್ಡ ಬಂದ ಕಾರನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ನಿಂತಿದ್ದ ಬೈಕ್, ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಇನ್ನು, ಘಟನೆಯಿಂದ ಗರ್ಭಿಣಿಯೊಬ್ಬರು ಗಂಭೀರ ಗಾಯಗೊಂಡಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದೆ. ಈ ಸರಣಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕ್ಯಾಂಟರ್ ಚಾಲಕ ಅಜೀತ್‌ನನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!