Connect with us

Hi, what are you looking for?

ರಾಜ್ಯ

ತಡರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಹತ್ಯೆ

2

ಬೆಳಗಾವಿ : ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಫಿಶ್ ಮಾರ್ಕೆಟ್ ಬಳಿ ನಡೆದಿದೆ. ಇಲ್ಲಿನ ಕ್ಯಾಂಪ್ ಪ್ರದೇಶ ನಿವಾಸಿ ಸುಧೀರ್ ಕಾಂಬಳೆ(57) ಕೊಲೆಗೀಡಾದವರು.

ಕೊಲೆಯಾದ ವ್ಯಕ್ತಿ ದುಬೈನಲ್ಲಿ ವಾಸವಾಗಿದ್ದರು. ಕಳೆದರೆಡು ವರ್ಷಗಳ ಹಿಂದೆ ಕೋವಿಡ್ ನಿಂದಾಗಿ ಬೆಳಗಾವಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ಸುಧೀರ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಪರಾರಿಯಾಗಿದ್ದಾರೆ.

Advertisement. Scroll to continue reading.

ಗಂಭೀರವಾಗಿ ಗಾಯಗೊಂಡ ಸುಧೀರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!