Connect with us

Hi, what are you looking for?

Diksoochi News

Uncategorized

ವಿಶ್ವಕಪ್: ಆಸೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ

0

ಚೆನ್ನೈ: ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಎಲ್ಲಾ ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತ್ತು.

ಆಸೀಸ್ ನೀಡಿದ 200 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಭಾರತ ಮೊದಲ ಆಘಾತ ಎದುರಾಗಿತ್ತು. ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾದರು. 

Advertisement. Scroll to continue reading.

ನಂತರ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈ ಜೋಡಿ 167 ರನ್ ಗಳ ಜೊತೆಯಾಟ ನೀಡಿತು. ವಿರಾಟ್ ಕೊಹ್ಲಿ 85 ರನ್ ಗಳಿಸಿ ಔಟಾದರೆ ಕೆಎಲ್ ರಾಹುಲ್ ಅಜೇಯ 97 ರನ್ ಬಾರಿಸಿ ತಂಡಕ್ಕೆ ಗೆಲುವಿನ ಸಿಹಿ ತಂದುಕೊಟ್ಟರು. ಇನ್ನು ಹಾರ್ದಿಕ್ ಪಾಂಡ್ಯ ಅಜೇಯ 11 ರನ್ ಬಾರಿಸಿದ್ದಾರೆ. ಭಾರತ 41.2 ಓವರ್ ನಲ್ಲಿ 201 ರನ್ ಗಳಿಸಿ ಗೆದ್ದು ಬೀಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!