Connect with us

Hi, what are you looking for?

ಸಿನಿಮಾ

ಖ್ಯಾತ ಯುವ ನಟಿ ದೀಪಾ ಆತ್ಮಹತ್ಯೆ!

2

ಚೆನ್ನೈ : ತಮಿಳು ಚಿತ್ರರಂಗದ ಯುವ ನಟಿ ದೀಪಾ ಅಲಿಯಾಸ್ ಪಾಲಿನ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಖಾಸಗಿ ಫ್ಲ್ಯಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಶನಿವಾರ ನಟಿ ದೀಪಾ ಕುಟುಂಬಸ್ಥರ ಫೋನ್ ರಿಸೀವ್ ಮಾಡಿರಲಿಲ್ಲ. ಬಳಿಕ ಕುಟುಂಬಸ್ಥರು ದೀಪಾ ಅವರ ಸ್ನೇಹಿತ ಪ್ರಭಾಕರನ್ ಅವರಿಗೆ ಕರೆ ಮಾಡಿದ್ದಾರೆ. ಪ್ರಭಾಕರನ್ ದೀಪಾ ಅವರ ಮನೆಗೆ ಬಂದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ದೀಪಾ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement. Scroll to continue reading.

ದೀಪಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದ್ದು, “ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ಸರಿಯಾಗಿ ನಡೆಯಲಿಲ್ಲ. ಹಾಗಾಗಿ ನಾನು ಇಹಲೋಕ ತ್ಯಜಿಸುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ” ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

29 ವರ್ಷ ವಯಸ್ಸಿನ ನಟಿಯ ನಿಜವಾದ ಹೆಸರು ಪಾಲಿನ್ ಜೆಸ್ಸಿಕಾ ಮಿಸ್ಕಿನ್ ಆಗಿದ್ದು, ದೀಪಾ ಎಂದು ಖ್ಯಾತಿಹೊಂದಿದ್ದರು.  

ದೀಪಾ ಹಲವು ತಮಿಳು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ. ಸಣ್ಣಪುಟ್ಟ ಪಾತ್ರಗಳ ಮೂಲಕ ತನ್ನ ನಟನೆಯಿಂದ ಉತ್ತಮ ಮನ್ನಣೆ ಗಳಿಸಿದ್ದರು. ನಾಸರ್ ಅಭಿನಯದ ‘ವೈಥಾ’ ಸಿನಿಮಾ ಮೂಲಕ ನಾಯಕಿಯಾಗಿ ಪರಿಚಯಿಸಲ್ಪಟ್ಟರು. ಸದ್ಯ ದೀಪಾ ವಿಶಾಲ್ ಅಭಿನಯದ ‘ತುಪ್ಪರಿವಾಲನ್’ ಚಿತ್ರದಲ್ಲಿ ನಟಿಸುತ್ತಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!