WORLD CUP 2023 : ಭಾರತ ಮತ್ತು ಪಾಕಿಸ್ತಾನ್ ತಂಡಗಳ ಹೈವೋಲ್ಟೆಜ್ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿತ್ತು.
ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಆತಿಥೇಯ ಭಾರತ ತಂಡಕ್ಕೆ 192 ರನ್‌ಗಳ ಸುಲಭ ಗುರಿ ನೀಡಲಾಯಿತು. ಸುಲಭ ಗುರಿ ಬೆನ್ನತ್ತಿದ ಭಾರತ 3 ವಿಕೆಟ್ ನಷ್ಟಕ್ಕೆ ರನ್ ಕಲೆಹಾಕಿ ಗೆದ್ದಿತು.
ಶುಭ್ಮನ್ ಗಿಲ್ (16) ಹಾಗೂ ವಿರಾಟ್ ಕೊಹ್ಲಿ (16) ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಭಾರತ ತಂಡದ ನಾಯಕ ರೋಹಿತ್ ಶರ್ಮ 63 ಎಸೆತಗಳಲ್ಲಿ 86 ರನ್ ಬಾರಿಸಿ ಶತಕ ವಂಚಿತರಾದರು. ಶ್ರೇಯಸ್ ಅಯ್ಯರ್ 53(62) , ಕೆ.ಎಲ್.ರಾಹುಲ್ 9(19) ರನ್ ಗಳಿಸಿ ಅಜೇಯರಾದರು.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 10 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್, ರವೀಂದ್ರ ಜಡೇಜಾ 9.5 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 6 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಸ್ವಲ್ಪ ದುಬಾರಿಯಾದ ಮೊಹಮ್ಮದ್ ಸಿರಾಜ್ 8 ಓವರ್‌ಗಳಲ್ಲಿ 50 ರನ್ ನೀಡಿ 2 ವಿಕೆಟ್ ಕಬಳಿಸಿದರು.