WORLD CUP 2023: ಟೀಂ ಇಂಡಿಯಾ ನಾಯಕ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ಪಾಕಿಸ್ತಾನ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾಧನೆ ಮೆರೆದಿದ್ದಾರೆ.
ಹೌದು, ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ವಿಶಿಷ್ಟವಾದ ‘ಟ್ರಿಪಲ್ ಸೆಂಚುರಿ’ ಗಳಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಡಕ್ ಔಟ್ ಆಗಿದ್ದ ರೋಹಿತ್ ಶರ್ಮಾ ಇಂದು ಅಹಮದಾಬಾದ್ ನಡೆದ ಏಕದಿನ ಪಂದ್ಯದಲ್ಲಿ ಸಿಕ್ಸರ್ ಗಳ ಮೂಲಕ ಉತ್ತರ ನೀಡಿ ಸೇಡು ತೀರಿಸಿಕೊಂಡಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ 300ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ. ವಿಶ್ವ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಶಾಹಿನ್ ಅಫ್ರಿದಿ ಏಕದಿನದಲ್ಲಿ 351 ಸಿಕ್ಸರ್ ಸಿಡಿಸಿದ್ದಾರೆ. ಕ್ರಿಸ್ ಗೇಲ್ 331 ಸಿಕ್ಸರ್ ಸಿಡಿಸಿದ್ದಾರೆ.
ಇನ್ನು, ಈ ಪಂದ್ಯದಲ್ಲಿ 6 ಸಿಕ್ಸ್, 6 ಬೌಂಡರಿ ಸಿಡಿಸಿ ರೋಹಿತ್ ಶರ್ಮಾ 63 ಎಸೆತಗಳಲ್ಲಿ 86 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.