Connect with us

Hi, what are you looking for?

ಕರಾವಳಿ

ಕುಂದಾಪುರ: ನಿರಂತರ ಪರಿಶ್ರಮದಿಂದ ಮಾತ್ರ ಉತ್ತಮ ಕ್ರೀಡಾಪಟುವಾಗಲು ಸಾಧ್ಯ: ಚಂದ್ರಶೇಖರ್ ಶೆಟ್ಟಿ ಕೆರಾಡಿ

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ದೈಹಿಕ ಶಿಕ್ಷಣ ಎನ್ನುವುದು ಶಿಕ್ಷೆಯಲ್ಲ, ಅದೊಂದು ವ್ಯಾಯಾಮ ಎಂದು ಎಲ್ಲರೂ ಅರಿತುಕೊಳ್ಳಬೇಕು. ಕ್ರೀಡೆ ಆರೋಗ್ಯವನ್ನು ವೃದ್ದಿಸುತ್ತದೆ. ಮಾನಸಿಕ ಸ್ಥೈರ್ಯ ತುಂಬುವ ಜೊತೆಗೆ ಜೀವನಪಾಠವನ್ನೂ ಕಲಿಸುತ್ತದೆ.ನಿರಂತರ ಪರಿಶ್ರಮದಿಂದ ಮಾತ್ರ ಉತ್ತಮ ಕ್ರೀಡಾಪಟುವಾಗಲು ಸಾಧ್ಯ ಎಂದು ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರಿನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ನುಡಿದರು.

ವಿ.ವಿ.ವಿ ಮಂಡಳಿ (ರಿ) ಹೆಮ್ಮಾಡಿ, ಸಮರ್ಪಣಾ ಎಜ್ಯುಕೇಶನ್ ಟ್ರಸ್ಟ್ (ರಿ) ಹೆಮ್ಮಾಡಿ ಆಡಳಿತದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಎಲ್ಲಾ ಕ್ರೀಡಾಪಟುಗಳು ಬಹುಮಾನವನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಛಲದಿಂದ ಬಂದಿದ್ದೀರಿ. ಎಲ್ಲರಿಗೂ ಇಲ್ಲಿ ಪ್ರಥಮ ಸ್ಥಾನ ಸಿಗುವುದಿಲ್ಲ. ಸಿಕ್ಕರೆ ಅದು ಸ್ಪರ್ಧೆಯಾಗಿ ಉಳಿಯುವುದಿಲ್ಲ. ಸೋಲು ಎನ್ನುವುದು ಮುಂದಿನ ಗೆಲುವಿಗೆ ಮೆಟ್ಟಿಲಾಗಬೇಕು. ಗೆದ್ದವರು ಸೋತವರನ್ನು ಗೌರವಿಸಬೇಕು ಎಂದು ಹೇಳಿದರು.

Advertisement. Scroll to continue reading.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜನತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಮಂಜು ಕಾಳಾವರ್, ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ತಾಲೂಕು ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಮಂಜುನಾಥ ಗಾಣಿಗ, ಕಾರ್ಯದರ್ಶಿ ಸುನೀಲ್ ಚಿತ್ತಾಲ್, ಕೋಶಾಧಿಕಾರಿ ಕಾರ್ತಿಕೇಯ ಎಮ್.ಎಸ್, ಉಪಪ್ರಾಂಶುಪಾಲ ರಮೇಶ್ ಪೂಜಾರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಕರಾದ ವಸಂತ್ ಕುಮಾರ್ ಶೆಟ್ಟಿ, ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಜನತಾ ಪಿಯು ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಪ್ರಸ್ತಾಪಿಸಿ ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಪ್ರಿಯಾಂಕ ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!