Connect with us

Hi, what are you looking for?

Diksoochi News

ರಾಷ್ಟ್ರೀಯ

ಕೇರಳ: ಅತಿಯಾದ ಮೊಬೈಲ್ ಬಳಕೆ ಪ್ರಶ್ನಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ!

0

ಕಾಸರಗೋಡು : ಮೊಬೈಲ್‌ನಲ್ಲೇ ಹೆಚ್ಚು ಹೊತ್ತು ಕಳೆಯುತ್ತಿದ್ದ ಮಗನನ್ನು ಪ್ರಶ್ನಿಸಿದ ತಾಯಿಯನ್ನು ಮಗನೇ ಕೊಲೆಗೈದಿರುವ ಘಟನೆ ನಡೆದಿದೆ.

ನೀಲೇಶ್ವರ ಕಣಿಚ್ಚಿರಕಾವುನ ರುಕ್ಮಿಣಿ(64) ಕೊಲೆಗೀಡಾದವರು. ಗಂಭೀರ ಗಾಯಗೊಂಡ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಹಿಳೆಯ ಪುತ್ರ ಸುಜಿತ್‍ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement. Scroll to continue reading.

ಅತಿಯಾಗಿ ಮೊಬೈಲ್‌ ಬಳಕೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿಯ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ‌

‌ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಆತನನ್ನು ಕೋಯಿಕ್ಕೋಡ್‌ನ ಸರ್ಕಾರಿ ಮಾನಸಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!