Connect with us

Hi, what are you looking for?

ಕರಾವಳಿ

ಸರಕಾರಿ ಪದವಿ ಪೂರ್ವ ಕಾಲೇಜು‌ (ಪ್ರೌಢ ಶಾಲಾ ವಿಭಾಗ) ಕರ್ಜೆ : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

1

ಕರ್ಜೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಡ್ಕ ಇವರ ಸಹಯೋಗದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜು‌ (ಪ್ರೌಢ ಶಾಲಾ ವಿಭಾಗ) ಕರ್ಜೆಯಲ್ಲಿ ಸಂತೆಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಡ್ಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ರಮೇಶ್ ಭಟ್ ನೂಜಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿಯ ಮೂಲಕ ಗ್ರಾಮೀಣ ಪ್ರತಿಭೆಗಳು ತಾಲ್ಲೂಕು ಜಿಲ್ಲೆ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನ ನೀಡಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ಜೆ ಗ್ರಾಮಪಂಚಾಯತಿನ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಇವರು ವಹಿಸಿದ್ದರು.

Advertisement. Scroll to continue reading.

ಮುಖ್ಯ ಅತಿಥಿಗಳಾಗಿ ಸುಕನ್ಯ ಶೆಟ್ಟಿ ಅಧ್ಯಕ್ಷರು ಕೆಂಜೂರು ಗ್ರಾಮ ಪಂಚಾಯತ್, ಸುರೇಂದ್ರ ನಾಯ್ಕ್ ಅಧ್ಯಕ್ಷರು ಎಸ್. ಡಿ. ಎಂ.ಸಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಡ್ಕ, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಂಗನಾಥ್, ಪ್ರತಿಭಾ ಕಾರಂಜಿಯ ತಾಲೂಕು ನೋಡಲ್ ರಾಘವ ಶೆಟ್ಟಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಕರ್ಜೆಯ ಪ್ರಾಂಶುಪಾಲ ರಾಜೇಶ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಈಶ್ವರ ಅಂಬಿಗ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಕ್ಷ್ಮಿ, ಸುರೇಶ್ ಕುಂದರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ತಾಲೂಕು ಅಧ್ಯಕ್ಷ ಶಾಂತರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಬ್ರಹ್ಮಾವರ ವಲಯ ಅಧ್ಯಕ್ಷ ಮನೋಹರ್ ಹೆಗ್ಡೆ, ಸಂತೆಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ದಿನೇಶ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು,ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ರವಿ ಎಸ್. ಪೂಜಾರಿ ಸ್ವಾಗತಿಸಿದರು, ಶಿಕ್ಷಕಿ ಶಾಲಿನಿ ವಂದಿಸಿದರು. ಸಹ ಶಿಕ್ಷಕಿ ಶಕುಂತಲಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಸಂತೆಕಟ್ಟೆ ಕ್ಲಸ್ಟರ್ ನ 13 ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.🙏🏻

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!