Connect with us

Hi, what are you looking for?

ಅಂತಾರಾಷ್ಟ್ರೀಯ

ನೇಪಾಳದಲ್ಲಿ ಎರಡು ಪ್ರತ್ಯೇಕ ಅಪಘಾತ : 12 ಮಂದಿ ಸಾವು, ಹಲವರಿಗೆ ಗಾಯ

2

ಕಠ್ಮಂಡು, ನೇಪಾಳ : ಎರಡು ಪ್ರತ್ಯೇಕ ಅಪಘಾತದಲ್ಲಿ 12 ಜನ ಮೃತಪಟ್ಟಿದ್ದು, ಅನೇಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಮಿನಿ ಬಸ್ ಪಲ್ಟಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಬಾಗ್ಮತಿ ಪ್ರಾಂತ್ಯದ ಮಕವಾನ್‌ಪುರದಲ್ಲಿ ಈ ಘಟನೆ ನಡೆದಿದೆ.

ಕಠ್ಮಂಡುವಿನಿಂದ ಬಿರ್‌ಗುಂಜ್‌ಗೆ ಹೋಗುತ್ತಿದ್ದ ಬಸ್‌ನ ನಿಯಂತ್ರಣ ತಪ್ಪಿ ಮಕವಾನ್‌ಪುರದಲ್ಲಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Advertisement. Scroll to continue reading.

ಪಶ್ಚಿಮ ನೇಪಾಳದ ಕ್ಯಂಗಾಸಿಬಗರ್ನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಠ್ಮಂಡುವಿನಿಂದ ರುಕುಮ್‌ಕೋಟ್‌ಗೆ ತೆರಳುತ್ತಿದ್ದ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಇತರ 13 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ

ಪೊಲೀಸರು ಗಾಯಾಳುಗಳನ್ನು ರುಕುಂಪುರ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!