Connect with us

Hi, what are you looking for?

Diksoochi News

ಕರಾವಳಿ

ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಅರ್ಜಿ ವಜಾ

1

ಬೆಂಗಳೂರು : ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ. ಹಾಲಾಶ್ರೀಗೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು.

ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

Advertisement. Scroll to continue reading.

ಅಷ್ಟಲ್ಲದೆ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೇರಿದಂತೆ ಕೆಲವರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್ಸಿಆರ್ ದಾಖಲಿಸಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!