Connect with us

Hi, what are you looking for?

ರಾಷ್ಟ್ರೀಯ

ಯುವ ಜೋಡಿ ಕೊಲೆ ಪ್ರಕರಣ : ಒಂದೇ ಕುಟುಂಬದ ನಾಲ್ವರಿಗೆ ಮರಣದಂಡನೆ

2

ಬದೌನ್ : 2017ರಲ್ಲಿ ನಡೆದ ಯುವ ಜೋಡಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ ನಾಲ್ವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಜಿಲ್ಲಾ ನ್ಯಾಯಾಧೀಶ ಪಂಕಜ್ ಅಗರವಾಲ್ ಅವರು ಕಿಶನ್‌ಪಾಲ್, ಅವರ ಪತ್ನಿ ಜಲಧಾರ ಮತ್ತು ಅವರ ಪುತ್ರರಾದ ವಿಜಯಪಾಲ್ ಮತ್ತು ರಾಮ್‌ವೀರ್‌ಗೆ ಗುರುವಾರ ಮರಣದಂಡನೆ ವಿಧಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ವಕೀಲ ಅನಿಲ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೇ 14, 2017 ರಂದು ಉರೈನ ಗ್ರಾಮದ ನಿವಾಸಿ ಪಪ್ಪು ಸಿಂಗ್ ಎಂಬುವರು ತಮ್ಮ ಮಗ ಗೋವಿಂದ್ (24) ಮತ್ತು ಕಿಶನ್‌ಪಾಲ್ ಅವರ ಪುತ್ರಿ ಆಶಾ (22) ಅವರ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ನಾಲ್ವರು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾರೆ ಎಂದು ದೂರು ನೀಡಿದ್ದರು.

Advertisement. Scroll to continue reading.

ಇಬ್ಬರೂ ಪ್ರೇಮಿಗಳಿಗೆ ಗ್ರಾಮದಲ್ಲಿ ತಮ್ಮ ಕುಟುಂಬಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿ ನೆಲೆಸಿದ್ದರು.

ಗೋವಿಂದ್ ಮತ್ತು ಆಶಾ ಅವರನ್ನು ಮದುವೆಯ ನೆಪದಲ್ಲಿ ದೆಹಲಿಯಿಂದ ಗ್ರಾಮಕ್ಕೆ ಕರೆಸಿಕೊಳ್ಳಲಾಗಿತ್ತು.

ನಂತರ ಗೋವಿಂದ್ ತಲೆಗೆ ಕಿಶನ್ ಪಾಲ್ ಹಿಂಬದಿಯಿಂದ ಕೊಡಲಿಯಿಂದ ಹೊಡೆದು ಕೊಂದಿದ್ದಾನೆ ಎನ್ನಲಾಗಿತ್ತು. ನಾಲ್ವರು ಆರೋಪಿಗಳು ಆಶಾ ಅವರ ಮೇಲೂ ಹಲ್ಲೆ ನಡೆಸಿ ಅವರನ್ನು ಕೂಡ ಕೊಂದಿದ್ದರು.

ಎರಡೂ ಕುಟುಂಬದವರು ಗ್ರಾಮದಲ್ಲಿ ತಮ್ಮ ಮಕ್ಕಳ ಶವಗಳನ್ನು ತೆಗೆದುಕೊಂಡು ಹೋಗುವುದನ್ನು ನೋಡಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದೇ ದಿನ ಸ್ಥಳಕ್ಕಾಗಮಿಸಿದ್ದ ಪೊಲೀಸರು ಕಿಶನ್ ಪಾಲ್ ನನ್ನು ಬಂಧಿಸಿದ್ದರು. ನಂತರ ಕುಟುಂಬದ ಇತರ ಸದಸ್ಯರನ್ನು ಬಂಧಿಸಲಾಗಿತ್ತು. ಇದೀಗ ಮರಣ ದಂಡನೆ ವಿಧಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!