Connect with us

Hi, what are you looking for?

ಕರಾವಳಿ

ತೆಕ್ಕಟ್ಟೆ : ಜಿಲ್ಲಾ ಮಟ್ಟದ ಶಿಶುವರ್ಗ ಮತ್ತು ಬಾಲವರ್ಗ ವಿಜ್ಞಾನ ಮೇಳ, ವೇದಗಣಿತ, ಗಣಿತ, ಸಂಸ್ಕೃತಿ ಜ್ಞಾನ ಮಹೋತ್ಸವ – 22 ಸ್ಪರ್ಧೆ

1

ಕುಂದಾಪುರ : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಪ್ರಸ್ತುತ ಪಡಿಸಿದ ಜಿಲ್ಲಾ ಮಟ್ಟದ ಶಿಶುವರ್ಗ ಮತ್ತು ಬಾಲವರ್ಗ ವಿಜ್ಞಾನ ಮೇಳ , ವೇದಗಣಿತ , ಗಣಿತ, ಸಂಸ್ಕೃತಿ ಜ್ಞಾನ ಮಹೋತ್ಸವ -22 ಸ್ಪರ್ಧೆಯು ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಯಲ್ಲಿ ದೀಪ ನಡೆಯಿತು.

ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ರಸಾಯನಶಾಸ್ತ್ರ ಉಪನ್ಯಾಸಕ ಶಂಕರ ನಾರಾಯಣ ಉಪಾಧ್ಯಾ ಕಾರ್ಯಕ್ರ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಪಾಂಡುರಂಗ ಪೈ ಸಿದ್ಧಾಪುರ ಅಧ್ಯಕ್ಷರು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ , ರಮೇಶ ನಾಯಕ್ ಸಂಚಾಲಕರು ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ,ಮಹೇಶ ಹೈಕಾಡಿ ಕಾರ್ಯದರ್ಶಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, ವಿಷ್ಣುಮೂರ್ತಿ ಭಟ್ ಮುಖ್ಯೋಪಾಧ್ಯಾಯರು ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ, ಸಂಧ್ಯಾಭಟ್ ಜಿಲ್ಲಾ ವಿಜ್ಞಾನ ಪ್ರಮುಖ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ 176ವಿದ್ಯಾರ್ಥಿಗಳು ಸ್ಪರ್ಧಿಸಿದರು. ವಿದ್ಯಾಭಾರತಿ ಕರ್ನಾಟಕ ಉಡುಪಿಯ ಕಾರ್ಯದರ್ಶಿ ಮಹೇಶ ಹೈಕಾಡಿ ಪ್ರಾಸ್ತಾವಿಕ ಮಾತನಾಡಿದರು. ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಮುಖ್ಯೋಪಾಧ್ಯಾಯ ವಿಷ್ಣುಮೂರ್ತಿ ಭಟ್, ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಯ ಸಂಧ್ಯಾ ಭಟ್ ವಂದಿಸಿದರು.

Advertisement. Scroll to continue reading.

ಸಮಾರೋಪ ಸಮಾರಂಭ : ಚಂದ್ರಶೇಖರ ಪಡಿಯಾರ್ ಉಪಾಧ್ಯಕ್ಷರು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ ಸಮಾರೋಪ ಸಮಾರಂಭ ಜರಗಿತು. ರಮೇಶ್ ನಾಯಕ್ ಸಂಚಾಲಕರು ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ, ಶ್ರೀ ವಿಷ್ಣುಮೂರ್ತಿ ಭಟ್ ಮುಖ್ಯೋಪಾಧ್ಯಾಯರು ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಉಪಸ್ಥಿತರಿದ್ದರು.

ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಧ್ಯಾ ಭಟ್, ಜಿಲ್ಲಾ ವಿಜ್ಞಾನ ಪ್ರಮುಖ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಸ್ವಾಗತಿಸಿ, ಮಹೇಶ ಹೈಕಾಡಿ ಕಾರ್ಯದರ್ಶಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ವಂದಿಸಿದರು. ಸಿಂಧೂ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!