Connect with us

Hi, what are you looking for?

ಕರಾವಳಿ

ಮಂಗಳೂರಿನಲ್ಲಿ ಪಿಎಫ್‌ಐಯ ಹತ್ತಕ್ಕೂ ಹೆಚ್ಚು ಮುಖಂಡರು ಪೊಲೀಸ್ ವಶಕ್ಕೆ

2

ಮಂಗಳೂರು : ಕಳೆದ ವಾರ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆ ಹಾಗು ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದ ಬೆನ್ನಲ್ಲೇ ಇಂದು ನಗರ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು ಪಿಎಫ್ಐ ಕಾರ್ಯಾಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಜಿಲ್ಲಾಧ್ಯಕ್ಷ ಸೇರಿ 14ಕ್ಕೂ ಹೆಚ್ಚು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ರಾಜ್ಯದಲ್ಲಿ ಪಿಎಫ್​ಐ ಮುಖಂಡರ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸುತ್ತಿರುವ ಭಾಗವಾಗಿ ಮಂಗಳೂರಿನಲ್ಲಿಯೂ ದಾಳಿ ನಡೆದಿದೆ. ರಾತ್ರೋರಾತ್ರಿ ಪೊಲೀಸರ ಭಾರಿ ಕಾರ್ಯಾಚರಣೆ ನಡೆಸಿದ್ದು, 14ಕ್ಕೂ ಅಧಿಕ ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪಿಎಫ್ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿದಂತೆ ಹಲವು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

Advertisement. Scroll to continue reading.

ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ ನಡೆಸಲಾಗಿತ್ತು. ವಶಕ್ಕೆ ಪಡೆದುಕೊಂಡ ಪಿಎಫ್ಐ ಮುಖಂಡರನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಅವರುಗಳನ್ನು ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ತರಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!