ಬೆಂಗಳೂರು : ಸರ್ಕಾರಿ ಸೇವೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಸ್ಕಾರ್ಫ್ ಹಾಕಲು ಅವಕಾಶ ನೀಡದಿರುವುದು ವ್ಯಕ್ತಿಗಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಬಳಿಕ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿ, ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ಗೊಂದಲಗಳಿವೆ ಸ್ಪಷ್ಟನೆ ನೀಡಿದರು.
ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ವಿಷಯದಲ್ಲಿ ಗೊಂದಲ ಮತ್ತು ವಿವಾದ ಸೃಷ್ಟಿಸಬೇಕು ಅನ್ನೋರಿಗೆ ಏನು ಹೇಳಲು ಸಾಧ್ಯವಿಲ್ಲ. ಸಮಸ್ಯೆ ಸೃಷ್ಟಿ ಮಾಡಲೆಂದೇ ಕೆಲವರು ಇರ್ತಾರೆ ಎಂದು ಸಚಿವರು ವಾಗ್ದಾಳಿ ನಡೆಸಿದರು.
ಪ್ರತಿಯೊಬ್ಬರ ಸ್ವಾತಂತ್ರ್ಯ ದೃಷ್ಟಿಯಲ್ಲಿ ನಾನು ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ವಿರೋಧ ಮಾಡೋರನ್ನು ಕೇಳಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ ಎಂದರು.
ಪ್ರತಿಯೊಬ್ಬರ ಸ್ವಾತಂತ್ರ್ಯ ದೃಷ್ಟಿಯಲ್ಲಿ ನಾನು ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ವಿರೋಧ ಮಾಡೋರನ್ನು ಕೇಳಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ ಎಂದರು.
ನ್ಯಾಯಾಲಯದ ಆದೇಶ ಇರೋದು ಕಾಲೇಜುಗಳಿಗೆ ಮಾತ್ರ. ಇದು ಬೋರ್ಡ್ ಪರೀಕ್ಷೆ. ನೀಟ್ ಪರೀಕ್ಷೆಯನ್ನು ಹಿಜಾಬ್ ಧರಿಸಿ ಬರೆಯಲು ಅವಕಾಶವಿದೆ ಎಂದು ಹೇಳಿದರು.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಬಂದು ತಪಾಸಣೆಗೆ ಒಳಗಾಗಬೇಕು. ಈ ವಿಷಯಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ ಎಂದು ಸಚಿವರು ಹೇಳಿದರು.
ಈ ವಿಷಯದಲ್ಲಿ ಕೆಲವರು ಗೊಂದಲ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿರಬಹುದು. ಎಲ್ಲರಿಗೂ ಅವರ ಇಚ್ಚೆಯಂತೆ ಬಟ್ಟೆ ಧರಿಸಲು ಅವಕಾಶವಿದೆ ಎಂದರು.
ಕೆಲವರು ಬೇರೆ ಬೇರೆ ಕಾರಣಗಳನ್ನ ಇರಿಸಿ ಗೊಂದಲ ಸೃಷ್ಟಿಸಲು ಮುಂದಾಗಬಹುದು. ಇಲ್ಲಿ ಯಾವುದೇ ಗೊಂದಲ್ ಇಲ್ಲ. ಪರೀಕ್ಷಾರ್ಥಿಗಳ ತಮ್ಮ ಇಷ್ಟದ ಬಟ್ಟೆ ಧರಿಸಿ ಬರೆಯಬಹುದು ಎಂದು ಸ್ಪಷ್ಟಪಡಿಸಿದರು.