Connect with us

Hi, what are you looking for?

ಕರಾವಳಿ

ಕುಂದಾಪುರ : ಸ್ವಚ್ಚತೆಯ ನಿಟ್ಟಿನಲ್ಲಿ‌ ಮಹಿಳೆಯರು‌ ಮತ್ತು ಮಕ್ಕಳ ಪಾತ್ರ ಮಹತ್ತರವಾದುದು : ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ

2

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ದಾಪುಗಾಲಿಟ್ಟಿದ್ದು, ಸ್ವಚ್ಚತೆಯ ನಿಟ್ಟಿನಲ್ಲಿ‌ ಮಹಿಳೆಯರು‌ ಮತ್ತು ಮಕ್ಕಳ ಪಾತ್ರ ಮಹತ್ತರವಾಗಿದೆ. ಗಾಂಧೀಜಿಯವರು ಹೇಳಿದಂತೆ ಸ್ವಚ್ಚತೆಯಿರುವಲ್ಲಿ ದೇವರನ್ನು ಕಾಣಬಹುದು ಎಂಬ ಪರಿಕಲ್ಪನೆಯಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಗಾಂಧೀಜಿಯವರ ಆಶಯವನ್ನು ಸಾಕಾರಗೊಳಿಸೋಣ ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಅವರು ಹೇಳಿದರು.

ತಾಲೂಕು ಪಂಚಾಯತ್ ಬೈಂದೂರು ಹಾಗೂ ಕುಂದಾಪುರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಗ್ರಾಮೀಣ ಜೋವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ), ಸಂಜೀವಿನಿ- ಉಡುಪಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ, ಸ್ವಚ್ವ ಭಾರತ್ ಮಿಷನ್ (ಗ್ರಾಮೀಣ), ಕೊಲ್ಲೂರು ಗ್ರಾಮಪಂಚಾಯತ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ತಾಲೂಕು ಮಟ್ಟದ ಸಂಜೀವಿನಿ ಒಕ್ಕೂಟ ಬೈಂದೂರು ‌ಮತ್ತು ಕುಂದಾಪುರ, ಕೊಲ್ಲೂರು‌ ಮಹಿಳಾ ಮಂಡಳ ಇವರ ಸಹಯೋಗದಲ್ಲಿ ಮಂಗಳವಾರ ಕೊಲ್ಲೂರು ಹಿರಿಯ‌ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆದ ಬೃಹತ್ ಸಾಮಾಜಿಕ ಸೇರ್ಪಡೆ ಹಾಗೂ ಸ್ವಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು‌ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಸ್ವಚ್ಚ ಭಾರತ್ ಪರಿಕಲ್ಪನೆಯಿತ್ತು. ಪ್ರಧಾನಿ ನರೇಂದ್ರ‌ ಮೋದಿಯವರು ಅ.2 ರಂದು ರಾಜ್ ಘಾಟ್ ನಲ್ಲಿ ಸ್ವಚ್ಚಗೊಳಿಸಿ ಅಧೀಕೃತವಾದ ಅಭಿಯಾನಕ್ಕೆ ಚಾಲನೆ ನೀಡಿದರು. ಬಯಲು ಶೌಚ ನಿರ್ಮೂಲನೆ, ಕೊಳಚೆಗೇರಿ, ಮಲಹೊರುವ ಪದ್ದತಿ ನಿರ್ಮೂಲನೆ ಜೊತೆಗೆ ಸ್ವಚ್ಚತೆ ಬಗ್ಗೆ ಅರಿವು ಹಾಗೂ ಮಾಹಿತಿ‌ ನೀಡುವ ನಿಟ್ಟಿನಲ್ಲಿ ಸ್ವಚ್ಚ ಭಾರತ ಅಭಿಯಾನ ಮಾಡಲಾಗುತ್ತಿದೆ. ಭಾರತದ ಎಲ್ಲಾ ನಗರ ಮತ್ತು ಹಳ್ಳಿಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ರಸ್ತೆ ಮತ್ತು ಮೂಲಸೌಕರ್ಯಗಳನ್ನು ಸ್ವಚ್ಚಗೊಳಿಸುವುದು ಮುಖ್ಯ ಉದ್ದೇಶ. ಕಸಗಳ ಬೇರ್ಪಡಿಸುವಿಕೆ ಸಹಿತ ವಿವಿಧ ಮಾಹಿತಿ ನೀಡಲಾಗುತ್ತಿದೆ ಎಂದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ ಮಾತನಾಡಿ, ಸಂಜೀವಿನಿ ಸಂಘದ ಮೂಲಕ ಕೇವಲ ಸಾಲ ಪಡೆಯುವುದು ಮಾತ್ರವಲ್ಲ. ಬದಲಾಗಿ ಸಾಮಾಜಿಕ, ಆರ್ಥಿಕ ಹಾಗೂ ಉದ್ಯಮ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೆ ತಲುಪಬೇಕೆಂಬುದು ಇದರ ಧ್ಯೇಯ. ಸಂಜೀವಿನಿ ಸಂಘದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ತಯಾರಿಸಿದ ವಸ್ತುಗಳಿಗೆ ಅಗತ್ಯ ಮಾರುಕಟ್ಟೆ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. ಇತ್ತೀಚೆಗೆ 21 ಕೋಟಿ ರೂ. ಸಮುದಾಯ ಬಂಡವಾಳ ನಿಧಿಯನ್ನು 51 ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟಗಳಿಗೆ ವಿತರಿಸಲಾಗಿದ್ದು ಮಹಿಳೆಯರಿಗೆ ಸ್ವದ್ಯೋಗಕ್ಕಾಗಿ ಸಾಲದ ರೂಪದಲ್ಲಿ ಆ ಹಣವನ್ನು ಪಡೆದು ಆರ್ಥಿಕ ಬಲಿಷ್ಟರಾಗಲು ಸಾಧ್ಯವಿದೆ ಎಂದರು. ಊರಿನ ಸ್ವಚ್ಚತೆ ಸೇವಾ ಮನೋಭಾವನೆ ತೋರಿಸುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಚತಾ ಹೀ ಸೇವಾ ಅಂದೋಲನದ ಮೂಲಕ ತಮ್ಮತಮ್ಮ ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಂಡು ಅಭಿವೃದ್ದಿಪಡಿಸಲು ಸಾಧ್ಯವಿದೆ ಎಂದರು.

ಕೊಲ್ಲೂರು ಗ್ರಾ.ಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೊಲ್ಲೂರು ಸಂಜೀವಿನಿ ಒಕ್ಕೂಟದ ಸದಸ್ಯೆ ಲತಾ ಶೆಟ್ಟಿ, ಎನ್.ಆರ್.ಎಲ್.ಎಂ ಯುವ ವೃತ್ತಿಪರರಾದ ಜಯಮಾಲ , ಕುಂದಾಪುರ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್ ಇದ್ದರು.

Advertisement. Scroll to continue reading.

ಕೊಲ್ಲೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರುಕ್ಕನಗೌಡ ಸ್ವಾಗತಿಸಿದರು. ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕಿ ನವ್ಯಾ ನಿರೂಪಿಸಿ, ವಲಯ ಮೇಲ್ವಿಚಾರಕ ಪ್ರಶಾಂತ್ ವಂದಿಸಿದರು.

ಇದೇ ವೇಳೆ ಕೊಲ್ಲೂರು ಪರಿಸರದಲ್ಲಿ ತ್ಯಾಜ್ಯ ಸಂಗ್ರಹಿಸುವ ಆಂದೋಲನ ನಡೆದಿದ್ದು‌ ನ್ಯಾಯಾಧೀಶರಾದ ಶರ್ಮಿಳಾ ಅವರು ಚಾಲನೆ ನೀಡಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!