ಜೆರುಸೆಲಂ: ಇಸ್ರೇಲ್ ಮತ್ತು ಗಾಜಾ ನಡುವಿನ ಸಂಘರ್ಷ ಮುಂದುವರೆದಿದೆ. ಈ ಎರಡೂ ಕಡೆಯಿಂದ ಹಲವು ಸಾವು ನೋವುಗಳು ಸಂಭವಿಸಿವೆ. ಈವರೆಗೆ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ನಡುವೆ ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಮಾಡಿದ ದಾಳಿಯಲ್ಲಿ ಬೆಟಾಲಿಯನ್ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದರು ಎಂದು ಇಸ್ರೇಲಿ ಸೇನಾಪಡೆ ತಿಳಿಸಿದೆ.

ಇಸ್ರೇಲ್ ಸೆಕ್ಯುರಿಟಿ ಏಜೆನ್ಸಿ ಶಿನ್ ಬೆಟ್‌ನ ನಿಖರವಾದ ಗುಪ್ತಚರ ಮಾರ್ಗದರ್ಶನದ ಅಡಿಯಲ್ಲಿ ಹಮಾಸ್ ಉಗ್ರರನ್ನು ಹೊಡೆದುರುಳಿಸಲಾಯಿತು. ಹಮಾಸ್‌ನ ಗುಪ್ತಚರ ನಿರ್ದೇಶನಾಲಯದ ಉಪ ಮುಖ್ಯಸ್ಥ ಶಾದಿ ಬರುದ್ ಹತರಾಗಿದ್ದಾರೆಂದು ಇಸ್ರೇಲಿ ರಕ್ಷಣಾ ಪಡೆ ತಿಳಿಸಿದೆ.
ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ರಾಷ್ಟ್ರಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.
ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ.
ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ, 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್ ಅನ್ನು ನಾಶಗೈಯ್ಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

Based on precise IDF and ISA intelligence, IDF fighter jets struck 3 senior Hamas operatives in the Daraj Tuffah Battalion.
The battalion's operatives played a significant role in the invasion and murderous attack against Israel on October 7, and is considered to be the most… pic.twitter.com/WOnmE2Cv3O— Israel Defense Forces (@IDF) October 26, 2023
