ಚೆನ್ನೈ: ಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಸೋಲುಂಡಿದೆ. ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು. ಇದರಿಂದಾಗಿ 46.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿತು. ದಕ್ಷಿಣ ಆಫ್ರಿಕಾ ಪರ ತಬ್ರೈಜ್ ಶಾಮ್ಸಿ 4, ಮಾರ್ಕೊ ಜಾನ್ ಸೇನ್ 3, ಗೆರಾಲ್ಡ್ ಕೊಯ್ಜಿ 2 ವಿಕೆಟ್ ಪಡೆದರು.
ಪಾಕಿಸ್ತಾನ ನೀಡಿದ 271 ರನ್ ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 47.2 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 271 ರನ್ ಗಳಿಸುವ ಮೂಲಕ ಗೆದ್ದು ಬೀಗಿತು. ದಕ್ಷಿಣ ಆಫ್ರಿಕಾ ಪರ ನಾಲ್ಕು ವಿಕೆಟ್ ಕಬಳಿಸಿದ ತಬ್ರೈಜ್ ಶಾಮ್ಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Advertisement. Scroll to continue reading.
In this article:Diksoochi news, ICC world cup, Pakistan, South Africa, south Africa vs pak
Click to comment