Connect with us

Hi, what are you looking for?

Diksoochi News

ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ 2023: ಭಾರತದ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ

1

ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತ ಹೊಸ ಇತಿಹಾಸ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್‌ಗಳು ದಾಖಲೆ ಬರೆದಿದ್ದಾರೆ.

ಈ ಮೇರು ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್‌ಗಳಿಗೆ ಶುಭಕೋರಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 100 ಪದಕಗಳ ಗರಿ; ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.

ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!