Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಹಸಿ ಕಸ ತ್ಯಾಜ್ಯ ಘಟಕದ ವಿರುದ್ದ ಬೃಹತ್ ಪ್ರತಿಭಟನಾ ಮೆರವಣಿಗೆ; ಗ್ರಾಮಸ್ಥರಿಂದ ಚಾಂತಾರು ಗ್ರಾಮ ಪಂಚಾಯತ್‌ಗೆ ಮುತ್ತಿಗೆ| Video

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ತಾಲೂಕು ವ್ಯಾಪ್ತಿಯ ಚಾಂತಾರು ಹೇರೂರು ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ತ್ಯಾಜ್ಯ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಗ್ರಾಮಸ್ಥರು ಇಂದು ಪಂಚಾಯತ್ ಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.


ಬೆಳಿಗ್ಗೆ ಹೇರೂರು ಶಾಲೆಯಿಂದ ಕಾಲ್ನಡಿಗೆಯಲ್ಲಿ ಹೊರಟ ಪ್ರತಿಭಟನಾ ಮೆರವಣಿಗೆಯು ಚಾಂತರು ಕೃಷಿ ಕೇಂದ್ರಕ್ಕೆ ತೆರಳಿ ಕೇಂದ್ರದ ಮುಖ್ಯಸ್ಥ ಡಾ. ರೇವಣ್ಣನವರ್‌ ಅವರಿಗೆ ಮನವಿ ಸಲ್ಲಿಸಿ ನಂತರ ಚಾಂತಾರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಲಾಯಿತು. ಪೊಲೀಸರು ಪಂಚಾಯತ್ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ತಡೆದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪಂಚಾಯಿತಿ ವಿರುದ್ಧ ಘೋಷಣೆ ಕೂಗಿ, ಪಂಚಾಯತ್ ಒಳಗಡೆ ಬಿಡಲು ಒತ್ತಾಯಿಸಿದರು. ಕೆಲವು ಹೊತ್ತು ಉದ್ದಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

Advertisement. Scroll to continue reading.


ಗ್ರಾಮದ ಸುಮಾರು 11 ಎಕರೆ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪಿಸಲು ಪಂಚಾಯತ್ ಮುಂದಾಗಿದೆ. ಈ ಪರಿಸರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, 200 ಮೀಟರ್ ಅಂತರದಲ್ಲಿ ಮಡಿಸಾಲು ಹೊಳೆ ಇದ್ದು ಸಾಕಷ್ಟು ವಾಸದ  ಮನೆಗಳಿವೆ. ಇಲ್ಲಿ ಘಟಕ ಸ್ಥಾಪನೆ ಮಾಡಿದರೆ ಜನರಿಗೆ ಮತ್ತು‌ ಪರಸರಕ್ಕೆ ಸಾಕಷ್ಟು ತೊಂದರೆಯಾಗುತ್ತದೆ. ಪರಿಸರ ಹದಗೆಡುವುದರ ಜೊತೆಗೆ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ‌ ಬೀರುತ್ತದೆ ಎಂಬುದು ಗ್ರಾಮಸ್ಥರ ಅಳಲಾಗಿದೆ.


ಇಂದಿ ಪಂಚಾಯತ್ ಮುತ್ತಿಗೆ ಹಾಕಿ ವಿಶೇಷ ಸಭೆ ಕರೆದು ತ್ಯಾಜ್ಯ ಘಟಕ ನಿರ್ಮಾಣ ಪ್ರಸ್ತಾಪ ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಕಾರರ ಒತ್ತಾಯಕ್ಕೆ ಮಣಿದು ಮಾತುಕತೆಗೆ ಪಂಚಾಯಿತಿ ಅಧ್ಯಕ್ಷರು ಹತ್ತು ಜನರಿಗೆ ಪಂಚಾಯತ್ ಒಳಗೆ ಪ್ರವೇಶ ನೀಡಿದರು. ಇದರಿಂದಾಗಿ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಕಾರರು ಸಾರ್ವಜನಿಕರ ಎದುರಲ್ಲೇ ಮಾತುಕತೆಗೆ ಒತ್ತಾಯಿಸಿದರು.


ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಪಂಚಾಯತ್ ಅಧ್ಯಕ್ಷೆ ಬೇಬಿ ಪೂಜಾರ್ತಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯಕ್ ಪ್ರತಿಭಟನಾ ಸ್ಥಳಕ್ಕೆ ಬಂದು  ಪ್ರತಿಭಟನಕಾರರ  ಮನವೊಲಿಸಿ, ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದೆ ಯಾವುದೇ ಕಾರಣಕ್ಕೂ ಚಾಂತಾರು ಪಂಚಾಯತ್ ವ್ಯಾಪ್ತಿಯಲ್ಲಿ ಹಸಿ ಕಸ ತ್ಯಾಜ್ಯ ಘಟಕ ಮಾಡಲು ಅವಕಾಶ ಕೊಡುವುದಿಲ್ಲ ಎನ್ನುವ ಭರವಸೆ ಕೊಟ್ಟು ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ತ್ಯಾಜ್ಯ ಹೋರಾಟ ಸಮಿತಿಯ ಸಂಚಾಲಕ ಸತೀಶ್ ಪೂಜಾರಿ, ಉಪ ಸಂಚಾಲಕ ಥಾಮಸ್ ಎಡಿಸನ್ ವಾಜ್, ಕೋಶಾಧಿಕಾರಿ ಪ್ರಭಾಕರ್ ಥಿಮ್ಸನ್, ಸಂತೋಷ್ ಜತನ್, ಹೆನ್ಸಿಲ್ ಡಿಸೋಜಾ, ಅಶೋಕ್ ಪೂಜಾರಿ, ರಮೇಶ್‌ ಕರ್ಕೆರಾ ಉಪಸ್ಥಿತರಿದ್ದರು.
ಮುಂಜಾಗ್ರತ ಕ್ರಮವಾಗಿ ಬ್ರಹ್ಮಾವರ ಠಾಣಾಧಿಕಾರಿ ಗುರುನಾಥ್ ಹಾದಿಮನಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!