Connect with us

Hi, what are you looking for?

ಕರಾವಳಿ

ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

3

ಮಂಗಳೂರು : ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಘೋಷಣೆ ಮಾಡಿದ್ದರು. ಇದೀಗ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ರಾಜ್ಯ ಬಿಜೆಪಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ರಾಜ್ಯ ಸರ್ಕಾರದ ಆದೇಶ ಪ್ರತಿಗಳನ್ನು ಹಂಚಿಕೊಂಡ ಬಿಜೆಪಿ, “ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ. ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಬಿಜೆಪಿ” ಎಂದು ಬರೆದುಕೊಂಡಿದೆ. ಇದನ್ನು ತನ್ನ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದೆ.

Advertisement. Scroll to continue reading.

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಹತ್ಯೆ ಮಾಡಿದರು. ಇದು ಭಾರೀ ಸಂಚಲನ ಸೃಷ್ಟಿಸಿತ್ತು.

ಕುಟುಂಬಕ್ಕೊಂದು ಉದ್ಯೋಗದ ಆಧಾರ ನೀಡಲು ಪ್ರವೀಣ್ ಪತ್ನಿಗೆ ಸರ್ಕಾರದ ಹುದ್ದೆಯನ್ನು ಕೊಡುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದ್ದರು. ಅದರಂತೆ ಈಗ ಗುತ್ತಿಗೆ ಆಧಾರಿತ ಸರ್ಕಾರಿ ಹುದ್ದಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!