Connect with us

Hi, what are you looking for?

ಸಿನಿಮಾ

ಹೊಂಬಾಳೆ ಫಿಲ್ಮ್ಸ್‌ನಿಂದ ಹೊಸ ಚಿತ್ರ; ಪವನ್ ಕುಮಾರ್ – ಫಹಾದ್ ಫಾಸಿಲ್ ಕಾಂಬಿನೇಷನ್‌ನಲ್ಲಿ ‘ಧೂಮಂ’

2

ಚಂದನವನ : ಸೂಪರ್ ಹಿಟ್ ಚಿತ್ರಗಳ ಮೂಲಕ ಮನೆ ಮಾತಾದ ಸಿನಿಮಾ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ನಿಂದ ಹೊಸ ಘೋಷಣೆ ಮಾಡಲಾಗಿದೆ. ವಿಶೇಷ ಎಂದರೆ ನಿರ್ದೇಶಕ ಪವನ್ ಕುಮಾರ್ ಮತ್ತು ಮಲಯಾಳಂ ನಟ ಫಹಾದ್ ಫಾಸಿಲ್ ಕಾಂಬಿನೇಷನ್‌ನಲ್ಲಿ ಹೊಸ ಚಲನಚಿತ್ರ ಮೂಡಿಬರುತ್ತಿದೆ. ಇದಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ಧೂಮಂ ಎಂದು ಶೀರ್ಷಿಕೆ ಇಡಲಾಗಿದೆ. ಇಂದು ಶೀರ್ಷಿಕೆ ವಿನ್ಯಾಸದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಕುತೂಹಲ ಹೆಚ್ಚಿಸಿದೆ.

ಈಗಾಗಲೇ ಲೂಸಿಯಾ, ಯು – ಟರ್ನ್ ರೀತಿಯ ಸಿನಿಮಾಗಳ ಮೂಲಕ ನಿರ್ದೇಶಕ ಪವನ್ ಕುಮಾರ್ ವಿಭಿನ್ನ ರುಚಿಯ ಚಿತ್ರಗಳನ್ನು ನೀಡಿ ಸಿನಿಪ್ರಿಯರಿಗೆ ಮನರಂಜನೆ ನೀಡಿದ್ದಾರೆ. ಸೂರರೈ ಪೋಟ್ರು ನಾಯಕಿ ಅಪರ್ಣಾ ಬಾಲಮುರಳಿ ಈ ಸಿನಿಮಾದ ನಾಯಕಿ. ಅಕ್ಟೋಬರ್ 9 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಇನ್ನು ಫಹಾದ್ ಫಾಸಿಲ್ ಬಹುಭಾಷಾ ಪ್ರಸಿದ್ಧ ನಟನಾಗಿದ್ದು, ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಹುಟ್ಟಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!