Connect with us

Hi, what are you looking for?

Diksoochi News

ರಾಷ್ಟ್ರೀಯ

ಹಮಾಸ್ ದಾಳಿಯ ಕುರಿತು ಉಲ್ಲೇಖಿಸದ ವಿಶ್ವಸಂಸ್ಥೆ: ಮತದಾನಕ್ಕೆ ಭಾರತ ಗೈರು

1

ನ್ಯೂಯಾರ್ಕ್: ಹಮಾಸ್ ದಾಳಿ ಉಲ್ಲೇಖಸದ ಕಾರಣ ಗಾಜಾ ಮೇಲೆ ಇಸ್ರೇಲ್ ದಾಳಿ ಕುರಿತ ವಿಶ್ವಸಂಸ್ಥೆ ಮತದಾನದಿಂದ ಭಾರತ ಗೈರಾಗಿದೆ ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಗಾಜಾದಲ್ಲಿ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕೆಂಬ ವಿಶ್ವಸಂಸ್ಥೆಯ ಮಹಾಸಭೆಯ ನಿರ್ಣಯದಿಂದ ಭಾರತ ಹೊರಗುಳಿದಿದೆ. ನಿರ್ಣಯದಲ್ಲಿ ಇಸ್ರೇಲ್ ಮೇಲಿನ ಹಮಾಸ್ ದಾಳಿ ಉಲ್ಲೇಖ ಇಲ್ಲ. ಭಯೋತ್ಪಾದಕ ಕೃತ್ಯಗಳನ್ನು ಜಗತ್ತು ಸಮರ್ಥಿಸಿಕೊಳ್ಳಬಾರದು ಎಂದು ಹೇಳಿದೆ.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಯನ್ನು ಎತ್ತಿಹಿಡಿಯುವುದು ಎಂಬ ಘೋಷ ವಾಕ್ಯದೊಂದಿಗೆ ಶುಕ್ರವಾರ ವಿಶ್ವಸಂಸ್ಥೆಯು ಜೋರ್ಡಾನ್ ಕರಡು ನಿರ್ಣಯ ಪ್ರಕಟಿಸಿದೆ.

Advertisement. Scroll to continue reading.

ಗಾಜಾದಲ್ಲಿ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕೆಂಬ ನಿರ್ಧಾರಕ್ಕೆ ಸದಸ್ಯ ರಾಷ್ಟ್ರಗಳ ಒಪ್ಪಿಗೆಗೆ ಯಾಚಿಸಿತ್ತು. ವಿಶ್ವಸಂಸ್ಥೆಯ ಈ ನಿರ್ಣಯಕ್ಕೆ 121 ಸದಸ್ಯ ರಾಷ್ಟ್ರಗಳು ಸಮ್ಮತಿಸಿದರೆ, 14 ರಾಷ್ಟ್ರಗಳು ವಿರುದ್ಧ ಮತ ಚಲಾಯಿಸಿದ್ದವು. 44 ದೇಶಗಳು ಈ ನಿರ್ಣಯದಿಂದ ಹೊರಗುಳಿದಿದೆ.

ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಬ್ರಿಟನ್ ದೇಶಗಳು ಕೂಡ ನಿರ್ಣಯ ಅಂಗೀಕಾರದಿಂದ ದೂರ ಉಳಿದಿದ್ದವು.

ಭಾರತದ ನಿರ್ಧಾರದ ಕುರಿತಂತೆ ವಿಶ್ವಸಂಸ್ಥೆ ರಾಯಭಾರ ಕಚೇರಿಗೆ ಭಾರತದ ಸಹಾಯಕ ಕಾಯಂ ಪ್ರತಿನಿಧಿ ಯೋಜ್ನಾ ಪಟೇಲ್ ಮಾತನಾಡಿ, ‘ಮಾನವೀಯತೆಗೆ ಭಯೋತ್ಪಾದನೆ ಒಂದು ಪಿಡುಗಾಗಿದ್ದು, ಅದಕ್ಕೆ ಯಾವುದೇ ಗಡಿ, ರಾಷ್ಟ್ರೀಯತೆ, ಜನಾಂಗದ ಮಿತಿಯಿಲ್ಲ. ಭಯೋತ್ಪಾದಕ ಕೃತ್ಯಗಳನ್ನು ಜಗತ್ತು ಸಮರ್ಥಿಸಿಕೊಳ್ಳಬಾರದು. ಈ ವಿಷಯದಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಾವೆಲ್ಲ ಒಂದಾಗಬೇಕಿದೆ. ಭಯೋತ್ಪಾದನೆ ವಿಚಾರವಾಗಿ ಶೂನ್ಯ ಸಹಿಷ್ಣುತೆಯನ್ನು ಹೊಂದಬೇಕಿದೆ’ ಎಂದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!