Connect with us

Hi, what are you looking for?

ರಾಜ್ಯ

ಮಠದ ಸಿಬ್ಬಂದಿ ವೇತನ ಚೆಕ್‌ಗಳಿಗೆ ಸಹಿ ಹಾಕಲು ಮುರುಘಾಶ್ರೀಗೆ ಅವಕಾಶ ನೀಡಿದ ಹೈಕೋರ್ಟ್

2

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್‌ಗಳಿಗೆ ಸಹಿ ಹಾಕಲು ಹೈಕೋರ್ಟ್ ಅನುಮತಿ ನೀಡಿದೆ.

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮಠದ ಸಿಬ್ಬಂದಿಗೆ ವೇತನ ಮತ್ತು ಇತರೆ ದೈನಂದಿನ ವೆಚ್ಚಗಳಿಗೆ ಸಂಬಂಧಿಸಿದ ಚೆಕ್ ಗಳಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸ್ವಾಮೀಜಿ ಅರ್ಜಿ ಸಲ್ಲಿಸಿದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. 

Advertisement. Scroll to continue reading.

ಮಠದ ವಿದ್ಯಾಪೀಠ ಸಂಸ್ಥೆಗಳ ಉದ್ಯೋಗಿ ಹಾಗೂ ಸಿಬ್ಬಂದಿಗೆ ವೇತನ ನೀಡುವುದಕ್ಕಾಗಿ ಅ. 3, 6 ಮತ್ತು 10 ರಂದು ಮಾತ್ರ ಚೆಕ್‌ಗಳಿಗೆ ಸಹಿ ಹಾಕಬಹುದು. ಸಹಿ ಪಡೆಯುವ ವ್ಯಕ್ತಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಈ ಪ್ರಕ್ರಿಯೆ ವೇಳೆ ತನಿಖಾಧಿಕಾರಿ ಹಾಗೂ ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಲ್ಲದೇ, ಸಹಿ ಮಾಡಿದ ಚೆಕ್‌ಗಳ ನಕಲು (ಜೆರಾಕ್ಸ್) ಪ್ರತಿಗಳನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!