ಗುವಾಹಟಿ: ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂತಹ ಅಪರಾಧಗಳನ್ನು ಮಾಡಿ ಜೈಲಿಗೆ ಹೋಗುವುದರಲ್ಲಿ ಮುಸ್ಲಿಮರು ಮೊದಲ ಸ್ಥಾನದಲ್ಲಿದ್ದಾರೆ ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.
ಅವರ ಹೇಳಿಕೆಯ ವೀಡಿಯೋ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ತಮ್ಮ ಹೇಳಿಕೆಗೆ ಅಜ್ಮಲ್ ಸಮರ್ಥಿಸಿಕೊಂಡಿದ್ದಾರೆ.
ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮುಸ್ಲಿಮರು ಅಪರಾಧ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಶಿಕ್ಷಣದ ಕೊರತೆಯೇ ಕಾರಣ ಎಂದು ಹೇಳಿದ್ದಾರೆ.
ದೇಶಾದ್ಯಂತ ಮುಸ್ಲಿಮರಲ್ಲಿ ಶಿಕ್ಷಣದ ಕೊರತೆ ಇದೆ ಎಂದ ಅವರು, ಸಮುದಾಯದಲ್ಲಿ ಅದರ ಬಗ್ಗೆ ಅರಿವು ಇಲ್ಲದಿರುವುದಕ್ಕೆ ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಯುವಕರಿಗೆ ಶಿಕ್ಷಣ ಬಹಳ ಮುಖ್ಯ. ಆದರೆ, ನಮ್ಮ ಮಕ್ಕಳು ಶಿಕ್ಷಣ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ.