Connect with us

Hi, what are you looking for?

ರಾಜ್ಯ

ಪಂಜಾಬ್‌ನಲ್ಲಿ ನಡೆದ ಅಪಘಾತದಲ್ಲಿ ಹಾವೇರಿ ಮೂಲದ ಯೋಧ ನಿಧನ; ಸಿಎಂ ಸಂತಾಪ

2

ಹಾವೇರಿ : ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧರೊಬ್ಬರು ಪಂಜಾಬಿನಲ್ಲಿ ಕರ್ತವ್ಯದಲ್ಲಿರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. 23 ವರ್ಷದ ಶಿವರಾಜ ಗಂಗಮ್ಮನವರ ಎಂಬುವವರು ಮೃತ ಯೋಧ.

2016 ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಶಿವರಾಜ ಅವರು, ಪಂಜಾಬಿನ ಬಟಿಂಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಶಿವರಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ ತಿಂಗಳಲ್ಲಿ ಶಿವರಾಜ್ ಊರಿಗೆ ಬಂದು ಹೋಗಿದ್ದರು ಎನ್ನಲಾಗಿದೆ.

Advertisement. Scroll to continue reading.

ಸಿಎಂ ಸಂತಾಪ: ಯೋಧ ಶಿವರಾಜ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಂತಾಪ ಸೂಚಿಸಿದ್ದಾರೆ. ಪಂಜಾಬಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!