ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ (24) ಮೃತ ಯುವಕ.
ಮನೆಯಿಂದ ಹೊರಗಡೆ ಫೋನಿನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.
Advertisement. Scroll to continue reading.
ಪ್ರಮೋದ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸೌಮ್ಯ ಸ್ವಭಾವದರಾಗಿದ್ದ ಪ್ರಮೋದ್ ವಾಲಿಬಾಲ್ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇವರದು ಬಡಕುಟುಂಬವಾಗಿದ್ದು, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ದುಃಖದಲ್ಲಿ ಮುಳುಗಿದೆ.
Advertisement. Scroll to continue reading.