ನವದೆಹಲಿ: ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ.
ಎಸಿಎಸ್ ರಾಕೇಶ್ ಸಿಂಗ್ ಅವರು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕದ ಪರ ಭಾಗವಹಿಸಿ ವಾದ ಮಂಡಿಸಿದರು. ಆದರೆ ಸಮಿತಿ ಮುಂದಿನ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಿದೆ.
Advertisement. Scroll to continue reading.
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ ಮತ್ತಿತರ ಕಡೆಗಳಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ನಡೆಸುತ್ತಿವೆ.
In this article:cauvery, CWRC, Diksoochi news, kaveri strike, kaveri water, thimilnadu, ಕಾವೆರಿ ನೀರು, ತಮಿಳುನಾಡು
Click to comment