Connect with us

Hi, what are you looking for?

ರಾಷ್ಟ್ರೀಯ

ಭಾರತೀಯ ಸೇನಾ ಹೆಲಿಕಾಪ್ಟರ್ ಪತನ; ಓರ್ವ ಪೈಲಟ್ ಸಾವು

4

ನವದೆಹಲಿ : ಭಾರತ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಇಂದು ಪತನಗೊಂಡಿದೆ. ಪರಿಣಾಮ ಒಬ್ಬ ಪೈಲಟ್ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತವಾಂಗ್ ಬಳಿಯ ಪ್ರದೇಶದಲ್ಲಿ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ದಿನನಿತ್ಯದ ವಿಹಾರದ ವೇಳೆ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಮೃತ ಪೈಲಟ್.

Advertisement. Scroll to continue reading.

ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!