Connect with us

Hi, what are you looking for?

Diksoochi News

ಕ್ರೀಡೆ

ಸೆಂಚುರಿ ಮಿಸ್ಸಾದರೂ, ಹಲವು ದಾಖಲೆ ಬರೆದ ಕೊಹ್ಲಿ

1

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ ಶತಕ ವಂಚಿತರಾದರೂ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅದ್ಭುತ ಇನಿಂಗ್ಸ್​ ಆಡಿ 88 ರನ್ ಸಿಡಿಸಿ ಔಟಾದರು.
ಅವರು ನಿರ್ಮಿಸಿದ ದಾಖಲೆಗಳು ಈ ರೀತಿ ಇದೆ…

ಈ ವರ್ಷ ಸಾವಿರ ರನ್:
ಈ ಅರ್ಧಶತಕದೊಂದಿಗೆ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಒಟ್ಟು 7 ಬಾರಿ ಈ ಸಾಧನೆ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ 8ನೇ ಬಾರಿ ಒಂದು ವರ್ಷದೊಳಗೆ 1000 ರನ್ ಪೂರೈಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ವಿಶ್ವಕಪ್‌ನಲ್ಲಿ ಹೆಚ್ಚು ಅರ್ಧಶತಕ:
ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 13 ಬಾರಿ 50+ ಸ್ಕೋರ್ಗಳಿಸಿ ಈ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 21 ಬಾರಿ 50+ ಸ್ಕೋರ್ಗಳಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

Advertisement. Scroll to continue reading.

ಅತೀ ಹೆಚ್ಚು 50+ ರನ್:

ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 12 ಬಾರಿ 50+ ಸ್ಕೋರ್​ಗಳಿಸಿದ್ದ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿತ್ತು. ಇದೀಗ 13ನೇ ಬಾರಿಗೆ 50+ ಸ್ಕೋರ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಏಕದಿನ ಪಂದ್ಯದಲ್ಲೇ ಅತ್ಯಧಿಕ ಅರ್ಧಶತಕ:
ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 145 ಬಾರಿ 50+ ಸ್ಕೋರ್ಗಳಿಸಿರುವ ಸಚಿನ್ ಅಗ್ರಸ್ಥಾನದಲ್ಲಿದ್ದರೆ, 118 ಬಾರಿ ಈ ಸಾಧನೆ ಮಾಡಿರುವ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ವೇಗದ 8 ಸಾವಿರ ರನ್:
ಈ ಅರ್ಧಶತಕದೊಂದಿಗೆ ಏಷ್ಯಾದಲ್ಲಿ ಅತೀ ವೇಗವಾಗಿ 8 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ.

Advertisement. Scroll to continue reading.

ಲಂಕಾ ವಿರುದ್ಧ 4 ಸಾವಿರ ರನ್:
ಶ್ರೀಲಂಕಾ ವಿರುದ್ಧ 4 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 5108 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 4 ಸಾವಿರಕ್ಕೂ ಅಧಿಕ ರನ್​ಗಳಿಸುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!