Connect with us

Hi, what are you looking for?

Diksoochi News

ಕ್ರೀಡೆ

ಘಾತಕ ದಾಳಿ: ಶಮಿ ಹೆಸರಿಗೆ ಹಲವು ದಾಖಲೆ

1

ವಿಶ್ವಕಪ್‌ನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಘಾತಕ ದಾಳಿ ಸಂಘಟಿಸಿ, ತಂಡಕ್ಕೆ ಸುಲಭ ಗೆಲವು ತಂದುಕೊಟ್ಟರು.
ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

ಐದು ವಿಕೆಟ್ ಕಬಳಿಸಿರುವ ಮೊಹಮ್ಮದ್ ಶಮಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 2 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ವಿಶ್ವಕಪ್‌ನಲ್ಲಿ ಅತ್ಯಧಿಕ ವಿಕೆಟ್:
ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಪಾಲಾಗಿದೆ. ಅವರು ಒಟ್ಟು 45 ವಿಕೆಟ್ ಕಬಳಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಝಹೀರ್ ಖಾನ್ ಹಾಗೂ ಜಾವಗಲ್ ಶ್ರೀನಾಥ್ ಹೆಸರಿನಲ್ಲಿತ್ತು. ಶ್ರೀನಾಥ್ ಹಾಗೂ ಝಹೀರ್ ಖಾನ್ ತಲಾ 44 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು.

Advertisement. Scroll to continue reading.

ಅತೀ ಹೆಚ್ಚು 5 ವಿಕೆಟ್ ಗೊಂಚಲು:
4ನೇ ಬಾರಿಗೆ 5 ವಿಕೆಟ್ ಕಬಳಿಸುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಾವಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. ಈ ಇಬ್ಬರು ಬೌಲರ್ಗಳು ತಲಾ 3 ಬಾರಿ 5 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು.

ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್:
ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ಭಾರತೀಯ ಬೌಲರ್ ಹಾಗೂ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಶಮಿಗೂ ಮುನ್ನ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಏಕದಿನ ವಿಶ್ವಕಪ್ನಲ್ಲಿ 3 ಬಾರಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ವೇಗಿ ಸರಿಗಟ್ಟಿದ್ದಾರೆ.

ಕಡಿಮೆ ಪಂದ್ಯದಲ್ಲಿ ಹೆಚ್ಚು ವಿಕೆಟ್:
ಈ ಬಾರಿಯ ವಿಶ್ವಕಪ್ನಲ್ಲಿ ಕೇವಲ 3 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಮಿ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಶಮಿ ನ್ಯೂಝಿಲೆಂಡ್ ವಿರುದ್ಧ 5 ಹಾಗೂ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಪಡೆದಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಮತ್ತೆ 5 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಅತೀ ಕಡಿಮೆ ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಶಮಿ ಹೆಸರಿಗೆ ಸೇರ್ಪಡೆಯಾಗಿದೆ.

4+ ವಿಕೆಟ್-ವಿಶ್ವದಾಖಲೆ:
ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಬಾರಿ 4+ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿತ್ತು. ಸ್ಟಾರ್ಕ್ 6 ಬಾರಿ 4+ ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 7ನೇ ಬಾರಿ 4+ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!