Connect with us

Hi, what are you looking for?

Diksoochi News

ಕ್ರೀಡೆ

ಈಡನ್ ಗಾರ್ಡನ್ಸ್‌ನಲ್ಲಿ ಕೊಹ್ಲಿ ಹುಟ್ಟು ಹಬ್ಬ ಆಚರಣೆ ದಿಢೀರ್ ರದ್ದು

0

ಕೋಲ್ಕತಾ: ಇಂದು 35ನೇ ವಸಂತಕ್ಕೆ ಕಾಲಿರಿಸಿರುವ ವಿರಾಟ್ ಕೊಹ್ಲಿ ಜನ್ಮದಿನವನ್ನು ಸ್ಮರಣೀಯವಾಗಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಇಂದು ಈಡನ್ ಗಾರ್ಡೆನ್ ನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ದಿಢೀರ್ ರದ್ದಾಗಿದೆ.

ವಿರಾಟ್ ಕೊಹ್ಲಿ ಇಂದು (ನವೆಂಬರ್ 5) ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ 2023 ರ ವಿಶ್ವಕಪ್‌ನ ಎಂಟನೇ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು, ಕೊಹ್ಲಿಯ ಈ ವಿಶೇಷ ದಿನವನ್ನು ಆಚರಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು. ಇದರ ನಡುವೆ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (CAB) ಕೊಹ್ಲಿ ಹುಟ್ಟುಹಬ್ಬವನ್ನು ಆಚರಿಸಲು ವಿಶೇಷ ಯೋಜನೆಗಳನ್ನು ಹಾಕಿಕೊಂಡಿತ್ತು.

ಅದರಂತೆ ಕ್ರೀಡಾಂಗಣದಲ್ಲಿ  ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳಿಗೆ 70,000 ಕೊಹ್ಲಿಯ ಮುಖವಾಡಗಳನ್ನು ನೀಡಲು ವ್ಯವಸ್ಥೆ ಮಾಡಿತ್ತು. ಅದರೊಂದಿಗೆ ಪಟಾಕಿ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ವಿರಾಟ್ ಕೊಹ್ಲಿಗೆ ಕೇಕ್ ಕೂಡ ಇರುತ್ತಿತ್ತು. ಆದರೆ ಈ ಎಲ್ಲ ಕಾರ್ಯಕ್ರಮ ರದ್ದಾಗಿದೆ.

Advertisement. Scroll to continue reading.

ಮೂಲಗಳ ಪ್ರಕಾರ, ಈ ಆಚರಣೆಯು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮವನ್ನು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ರದ್ದುಗೊಳಿಸಿದೆ ಎಂದು ಹೇಳಲಾಗಿದೆ. ಆದರೆ, ಅಭಿಮಾನಿಗಳು ಕ್ರೀಡಾಂಗಣದಲ್ಲಿ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹಾಡಲಿದ್ದು, ತಂಡದ ಡ್ರೆಸ್ಸಿಂಗ್ ರೂಮ್‌ನ ಒಳಗೆ ಮಾತ್ರ ಕೇಕ್ ಕಟ್ಟಿಂಗ್ ನಡೆಯಲಿದೆಯಂತೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!