ನವದೆಹಲಿ : ಹಿಜಾಬ್ ವಿವಾದಕ್ಕೆ ಸಂಬಂಧ ಪಟ್ಟಂತೆ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ ಮುಖ್ಯನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ ವರ್ಗಾಯಿಸಲಾಗಿದೆ. ಹೀಗಾಗಿ ವಿಸ್ತೃತ ಪೀಠ ರಚನೆ ಮಾಡಿ ನೀಡುವ ಸಾಧ್ಯತೆ ಇದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ದ್ವಿ ಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಳಿಸಲಾಗಿದೆ. ನ್ಯಾ. ಹೇಮಂತ್ ಗುಪ್ತಾ, ಹೈಕೋರ್ಟ್ ಆದೇಶ ಎತ್ತಿ ಹಿಡಿದಿದ್ದಾರೆ. ಆದರೆ, ನ್ಯಾ. ಧುಲಿಯಾ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ ಸಿಜೆಐ ವಿಸ್ತೃತ ಪೀಠ ರಚಿಸಲಿದ್ದಾರೆ.

ಈ ಪೀಠವು 10 ದಿನಗಳ ವಾದಗಳನ್ನು ಆಲಿಸಿದ ನಂತರ ಸೆಪ್ಟೆಂಬರ್ 22ರಂದು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳ ತೀರ್ಪನ್ನು ಮೂರು ವಾರಗಳ ಹಿಂದೆಯೇ ಕಾಯ್ದಿರಿಸಲಾಗಿತ್ತು.
ಉಡುಪಿಯ ಸರಕಾರಿ ಪಿಯು ಕಾಲೇಜಿನಲ್ಲಿ ಜನವರಿ 1 ರಂದು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ ಎಂದು 6 ವಿದ್ಯಾರ್ಥಿನಿಯರು ಆರೋಪಿಸಿದ್ದರು. ಇದು ಹೈಕೋರ್ಟ್ ಮೆಟ್ಟಿಲೇರಿತ್ತು. ಅಲ್ಲಿ ಸಮವಸ್ತ್ರ ಕಡ್ಡಾಯ ಎಂಬ ತೀರ್ಪು ಬಂದ ಹಿನ್ನೆಲೆ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

