ಉಡುಪಿ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆ. ಮೋಹನ್ ದಾಸ್ (73) ಮೃತ ವ್ಯಕ್ತಿ. ಮೋಹನದಾಸ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
Advertisement. Scroll to continue reading.
ಕಾರು ಚಾಲಕ ಸದಾಶಿವ ಎಂಬವರ ದುಡುಕುತನ, ನಿರ್ಲಕ್ಷ್ಯತನದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಈ ಬಗ್ಗೆ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.