ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟವರು. ಸೋಮವಾರ ಮುಂಜಾನೆ 3 ಗಂಟೆಗೆ ಮಹಿಳಾ ಹಾಸ್ಟೆಲ್ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.