ಮಲ್ಪೆ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಂತಕನ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ತಂಡಗಳ ನೇತೃತ್ವವನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಶ್ರೇಣಿಯ ಅಧಿಕಾರಿಗಳು ವಹಿಸಲಿದ್ದಾರೆ.
ಹಂತಕ ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ ಮಾಡಿರೋದು ಪತ್ತೆಯಾಗಿದೆ. ಎದೆ ಮತ್ತು ಹೊಟ್ಟೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ. ಪರಿಚಯಸ್ಥನೇ ಕೊಲೆ ಮಾಡಿದ್ದಾನಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ ವ್ಯವಹಾರ ಮತ್ತಿತರ ಆಯಾಮಗಳಲ್ಲಿ ಈ ತಂಡಗಳು ತನಿಖೆ ನಡೆಸಲಿವೆ. ಮೃತ ಕುಟುಂಬದ ಓರ್ವ ಸದಸ್ಯ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇಬ್ಬರು ಯುವತಿಯರೂ ಉದ್ಯೋಗದಲ್ಲಿದ್ದಾರೆ. ಮನೆಯ ಯಜಮಾನ ನೂರ್ ಮುಹಮ್ಮದ್ ವಿದೇಶದಲ್ಲಿ ಉದ್ಯೋಗದಲ್ಲಿದ್ದರು.
ಏನಿದು ಪ್ರಕರಣ?
ಭಾನುವಾರ ನೇಜಾರಿನ ತೃಪ್ತಿನಗರದ ಮನೆಯೊಂದರ ಹಸೀನಾ ಹಾಗೂ ಆಕೆಯ 11ವರ್ಷದ ಬಾಲಕ, ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಮಹಿಳೆ ಹಸೀನಾಳ ಅತ್ತೆ ಮೇಲೂ ಹಲ್ಲೆ ನಡೆಸಿ ಹಂತಕ ಪರಾರಿ ಆಗಿದ್ದಾನೆ.