Connect with us

Hi, what are you looking for?

Diksoochi News

ಕ್ರೀಡೆ

ಭಾರತ – ನ್ಯೂಜಿಲೆಂಡ್ ಸೆಮಿಫೈನಲ್: ಹಲವು ದಾಖಲೆ ಉಡೀಸ್

1

ಭಾರತ ಕ್ರಿಕೆಟ್ ತಂಡ ನಾಲ್ಕನೇ ಬಾರಿ ವಿಶ್ವಕಪ್ ಫೈನಲ್ ತಲುಪಿದೆ. ಈ ಬಾರಿಯ ಸೆಮಿಫೈನಲ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಅದ್ಭುತ ಆಟ ಹಾಗೂ ಶಮಿ ಘಾತಕ ಬೌಲಿಂಗ್ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಮಣಿಸಿತು.

ಈ ಪಂದ್ಯದಲ್ಲಿ ಭಾರತದ ಆಟಗಾರರು ಹಲವಾರು ದಾಖಲೆಗಳನ್ನು ಬರೆದರು. ಅವುಗಳು ಹೀಗಿವೆ.

  1. ಒಂದೇ ವಿಶ್ವಕಪ್‌ನಲ್ಲಿ ಮೂರು ಬಾರಿ ಐದು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾದರು.
  2. ವಿಶ್ವಕಪ್ ನಾಕೌಟ್‌ನಲ್ಲಿ ಬೆಸ್ಟ್ ಬೌಲಿಂಗ್ ಹೆಸರು ಕೂಡ ಶಮಿ (7/57) ಪಾಲಾಯಿತು. ಈ ಮೊದಲು ಈ ದಾಖಲೆ ಆಸ್ಟ್ರೇಲಿಯಾದ ಗ್ಯಾರಿ ಗಿಲ್ಮೋರ್ (6/14) ಹೆಸರಲಿತ್ತು.
  3. ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಐದು ವಿಕೆಟ್
    ಮೊಹಮ್ಮದ್ ಶಮಿ ವಿಶ್ವಕಪ್‌ನಲ್ಲಿ 4 ಬಾರಿ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಮಿಚೆಲ್ ಸ್ಟಾರ್ಕ್ ಹೆಸರಲ್ಲಿದ್ದ ದಾಖಲೆಯನ್ನು ಮುರಿದರು.
  4. ವಿಶ್ವಕಪ್ ಒಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಶಮಿ (23) ಪಾಲಾಯಿತು. ಈ ಮೊದಲು 2011ರ ವಿಶ್ವಕಪ್‌ನಲ್ಲಕ ಜಹೀರ್ ಖಾನ್ 21 ವಿಕೆಟ್ ಕಬಳಿಸಿದ್ದರು.
  5. ಸೆಮಿಫೈನಲ್‌ನಲ್ಲಿ ಶತಕ ಪೂರೈಸುವುದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ 49 ಶತಕಗಳನ್ನು ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 50ನೇ ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  6. ಈ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ 80 ರನ್ ಪೂರೈಸಿದಾಗ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದರು. ಈ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2003 ರ ವಿಶ್ವಕಪ್​ನಲ್ಲಿ ಸಚಿನ್ 673 ರನ್​ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಈ ಬಾರಿಯ ವಿಶ್ವಕಪ್​ನಲ್ಲಿ 711 ರನ್​ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
  7. ಈ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 3 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್​ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 2003 ರ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್​ಗಳಿಸಿದ್ದರು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  8. ಒಂದೇ ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಸಿಕ್ಸರ್:
    28- ರೋಹಿತ್ (2023)
    26 ಗೇಲ್ (2015)
    24 ಶ್ರೇಯಸ್ ಅಯ್ಯರ್ (2023)
    22 ಮ್ಯಾಕ್ಸ್ ವೆಲ್ (2023)
  9. ವಿಶ್ವಕಪ್‌ನಲ್ಲಿ ಸತತ ಗೆಲುವು
    25 – ಆಸ್ಟ್ರೇಲಿಯಾ (1999-2011)
    11 – ಭಾರತ (2011-2015)
    10 – ಭಾರತ (2023)
  10. ಒಂದೇ ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಗೆಲುವು
    11 – ಅಸ್ಟ್ರೇಲಿಯಾ ( 2003)
    11- ಆಸ್ಟ್ರೇಲಿಯಾ (2007)
    10* – ಭಾರತ (2023)

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!