ಬೆಂಗಳೂರು : ಕೊನೆಗೂ ಬಿಜೆಪಿ ವಿಪಕ್ಷ ನಾಯಕ ಆಯ್ಕೆಯಾಗಿದೆ. ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಆರ್. ಅಶೋಕ್ ಅವರು ವಿಪಕ್ಷ ನಾಯಕ ಹುದ್ದೆಗೇರಿದ್ದಾರೆ. ಹೈಕಮಾಂಡ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅಶೋಕ್ ಅವ್ರ ಹೆಸರನ್ನ ಸೂಚಿಸಿದ್ರೆ, ಶಾಸಕ ಸುನಿಲ್ ಕುಮಾರ್ ಇದಕ್ಕೆ ಅನುಮೋದನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಹೆಸರಿಗೆ ಅನುಮೋದನೆ ನೀಡಿದರು. ಈ ಮೂಲಕ ವಿಪಕ್ಷ ನಾಯಕರಾಗಿ ಆರ್ ಅಶೋಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಆರ್. ಅಶೋಕ್ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಾಗಿರು ಅಶೋಕ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು.
Advertisement. Scroll to continue reading.
In this article:B.S.Yadiyurappa, basavaraj Bommai, bjp, congress, Diksoochi news, R ashok, ವಿಪಕ್ಷ ನಾಯಕ
Click to comment