ಅಹಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ನಿಲ್ಲಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪಂತ್‌ವಂತ್ ಸಿಂಗ್ ಪನ್ನುನ್ ಮತ್ತೊಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ.
ವೀಡಿಯೋದಲ್ಲಿ, ನಿಷೇಧಿತ ಖಲಿಸ್ತಾನಿ ಸಂಘಟನೆ ‘ಸಿಖ್ಸ್ ಫಾರ್ ಜಸ್ಟೀಸ್’ ಸ್ಥಾಪಕ 1984ರ ಸಿಖ್ ವಿರೋಧಿ ದಂಗೆ ಮತ್ತು 2002ರ ಗುಜರಾತ್ ಗಲಭೆಗಳ ಬಗ್ಗೆ ಹೇಳಿರುವುದು ಕಾಣಬಹುದು.
ಪನ್ನುನ್ ಬೆದರಿಕೆ ವೀಡಿಯೊವನ್ನ ಬಿಡುಗಡೆ ಮಾಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ, ಪನ್ನುನ್ ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧದಿಂದ ಪಾಠ ಕಲಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆ ಹಾಕಿದ್ದ.
ನಿಷೇಧಿತ ಅಮೆರಿಕ ಮೂಲದ ಸಿಖ್ಸ್ ಫಾರ್ ಜಸ್ಟೀಸ್ (SFJ) ಸಂಘಟನೆಯ ಮುಖ್ಯಸ್ಥರಾಗಿರುವ ಪನ್ನುನ್ ವಿರುದ್ಧ
ಸೆಪ್ಟೆಂಬರ್‌ನಲ್ಲಿ, ಭಾರತ-ಪಾಕಿಸ್ತಾನ ಐಸಿಸಿ ವಿಶ್ವಕಪ್ 2023 ಪಂದ್ಯಕ್ಕೆ ಮುಂಚಿತವಾಗಿ ಬೆದರಿಕೆ ಹಾಕಿದ ಮತ್ತು ದ್ವೇಷವನ್ನ ಉತ್ತೇಜಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿದೆ.