ಬ್ರಹ್ಮಾವರ : ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಶೈಕ್ಷಣಿಕ ಸಮಿತಿ ಮತ್ತು ಪ್ರತಿಭಾ ದಿನಾಚರಣೆ ಶುಕ್ರವಾರ ಪ್ರಿನ್ಸಿಪಾಲ್ ಪ್ರೊ. ರಮೇಶ ಆಚಾರ್ ಅಧ್ಯಕ್ಷತೆಯಲ್ಲಿ ಜರುಗಿತು.
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪದವಿ ಪೂರ್ವ ಕಾಲೇಜು, ಮಂದಾರ್ತಿ ಇದರ ಪ್ರಿನ್ಸಿಪಾಲ್ ಡಾ. ಪ್ರವೀಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿನಿಧಿಗಳು ಈ ಶೈಕ್ಷಣಿಕ ಸಾಲಿನಲ್ಲಿ ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿ ಪ್ರತಿಜ್ಞಾವಿಧಿ ಬೋಧಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಹತ್ತು ತಂಡದಿಂದ ನಾನಾ ಪ್ರತಿಭಾ ಪ್ರದರ್ಶನ ಮಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಸಾಂಸ್ಕೃತಿಕ ಸಮಿತಿಯ ಸಂಚಾಲಕ ನಿರಂಜನ ಶರ್ಮ ಸ್ವಾಗತಿಸಿ, ಕುಮಾರಿ ರೇಷ್ಮಾ ವಂದಿಸಿ, ಕುಮಾರಿ ನಂದಿಲ ಕಾರ್ಯಕ್ರಮ ನಿರೂಪಿಸಿದರು.
Advertisement. Scroll to continue reading.
In this article:barkuru, Diksoochi news, Rukmini shedthi smaraka national college, Udupi news
Click to comment