ದಾವಣಗೆರೆ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ.
ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು. ಹೀಗಾಗಿ ದಾವಣಗೆರೆಯ ವಿರುಕ್ತ ಮಠಕ್ಕೆ ಆಗಮಿಸಿದ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ. ಸದ್ಯ ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ.
1ನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಶ್ರೀಗಳ ಬಿಡುಗಡೆಯಾಗಿತ್ತು. ಆದರೆ 2ನೇ ಪೋಕ್ಸೋ ಕೇಸ್‌ನಲ್ಲಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು.
Advertisement. Scroll to continue reading.
ಮುರುಘಾ ಶ್ರೀಗಳನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದ್ದರಿಂದ ಶ್ರೀಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು, ಬೆಂಬಲಿಗರು ಇರುವುದರಿಂದ ಅಹಿತಕರ ಘಟನೆ ನಡೆಯದಂತೆ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
In this article:arrest, Chithradurga, court, Diksoochi news, Featured, Murugha Shree, sexual harassment
Click to comment