ಅಹಮದಾಬಾದ್: ಭಾನುವಾರ ಅಹಮಾದಾಬಾದ್‌ನಲ್ಲಿ ನಡೆದಿದ್ದ 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಆಸ್ಟ್ರೇಲಿಯಾ ಆರನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತ ಫೈನಲ್ ಪಂದ್ಯದಲ್ಲಿ ಎಡವಿದ್ದು, ಆಸ್ಟ್ರೇಲಿಯಾ ಗೆದ್ದು ಬೀಗಿದೆ.
ಆಸೀಸ್ ಆಟಗಾರರು ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಆದರೆ, ಮಿಚೆಲ್ ಮಾರ್ಷ್ ಸಂಭ್ರಮ ಮಾತ್ರ ಅತಿರೇಕವಾಗಿತ್ತು. ಹೌದು, ಮಿಚೆಲ್, ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ.

ಮಿಚೆಲ್ ಮಾರ್ಷ್ ಅವರು ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು, ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫಾ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್ಸ್ಟಾಗ್ರಾಮಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಕ್ರಿಕೆಟ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಮಿಚೆಲ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸುತ್ತಿದ್ದಾರೆ.
Shame on You #MitchellMarsh and @CricketAus. Such a disgusting thing that he put his legs on #WorldCup🏆 Such a shame. Take some action against them @ICC . He would have respected the cup. Such a shameless behavior by him 😡
#Worlds2023 #AustraliaVsIndia #Worldcupfinal2023… pic.twitter.com/QBOJ302zTQ— Tharani ᖇᵗк (@iam_Tharani) November 20, 2023

