ನವದೆಹಲಿ : ನವೆಂಬರ್ 23 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಐ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ನೀಡಲಾಗಿದೆ.
PHOTO | Suryakumar Yadav to lead India in the five-match T20 series against Australia. #INDvAUS #T20I
(PTI File Photo) pic.twitter.com/gBPIzpjzTV— Press Trust of India (@PTI_News) November 20, 2023
ಭಾರತ ತಂಡ ಹೀಗಿದೆ :
ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಇನ್ನು, ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ 20 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಉಪನಾಯಕರಾಗಿ ತಂಡವನ್ನ ಸೇರಿಕೊಳ್ಳಲಿದ್ದಾರೆ.
Australia’s tour of India, 2023 | India’s squad for the T20I series against Australia announced
India’s squad: Suryakumar Yadav (Captain), Ruturaj Gaikwad (vice-captain), Ishan Kishan, Yashasvi Jaiswal, Tilak Varma, Rinku Singh, Jitesh Sharma (wk), Washington Sundar, Axar Patel,… pic.twitter.com/gr1w7fkixY— ANI (@ANI) November 20, 2023
ಲಕ್ಷ್ಮಣ್ ಕೋಚ್ :
ಈ ಸರಣಿಗೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಡೆಮಿ (ಎನ್‌ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ.
ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಏಕದಿನ ವಿಶ್ವಕಪ್ ಆಡಿದ ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

