ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಮನೆಯೊಂದರ ಎಲ್ಪಿಜಿ ಸಿಲಿಂಡರ್ ಸ್ಪೋಟಗೊಂಡು, ಅದರಲ್ಲಿದ್ದ ಐವರು ಗಂಭೀರ ಗಾಯಗೊಂಡಿರುವ ಘಟನೆ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು.
ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Advertisement. Scroll to continue reading.