India vs Australia : ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯದ ಬೆನ್ನಲ್ಲೇ ಟಿ20 ಸರಣಿ ಕ್ರಿಕೆಟ್ ಅಭಿಮಾನಿಗಳ ಮುಂದೆ ತೆರೆದುಕೊಳ್ಳುತ್ತಿದೆ. ವಿಶ್ವಕಪ್ ಫೈನಲ್‍ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಿದೆ.
ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಜೆ 7 ಗಂಟೆಗೆ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್‍ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.
ಸೂರ್ಯಕುಮಾರ್ ಸಾರಥ್ಯ:
ಈ ಟಿ20 ಸರಣಿಯಲ್ಲಿ ಭಾರತ ತಂಡದ ಸಾರಥಿಯಾಗಿ ಸೂರ್ಯಕುಮಾರ್ ಯಾದವ್ ಇರಲಿದ್ದಾರೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದು, ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ತಿಲಕ್ ವರ್ಮಾ ಈ ಸರಣಿಯಲ್ಲಿದ್ದಾರೆ.
ಇನ್ನು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತವು 6 ನೇ ಸ್ಥಾನದಲ್ಲಿರುವ ಫಿನಿಶರ್‍ಗಾಗಿ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಆಲ್‍ರೌಂಡರ್‍ಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಜೊತೆ ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಇದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್, ಅವೇಶ್ ಖಾನ್ ವೇಗಿಗಳಾಗಿದ್ದಾರೆ.
ಆಸ್ಟ್ರೇಲಿಯಾ ತಂಡ:
ಇತ್ತ ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಡೇವಿಡ್ ವಾರ್ನರ್, ಶಾನ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‍ವುಡ್ ಮತ್ತು ಮಿಚೆಲ್ ಸ್ಟಾರ್ಕ್‍ಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಜೇಸನ್ ಬೆಹ್ರೆನ್‍ಡಾರ್ಫ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಮಾರ್ಷ್ ಅನುಪಸ್ಥಿತಿಯಲ್ಲಿ ಟಿಮ್ ಡೇವಿಡ್ ಫಿನಿಶರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಜೊತೆಗೆ ನಾಥನ್ ಎಲ್ಲಿಸ್, ತನ್ವೀರ್ ಸಂಘ, ಸೀನ್ ಅಬಾಟ್ ಮತ್ತು ಝಂಪಾ, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಗ್ಲೆನ್ ಮ್ಯಾಕ್ಸ್‍ವೆಲ್ ಇದ್ದಾರೆ.
ಪಂದ್ಯ ಆರಂಭ: ಸಂಜೆ 7 ಗಂಟೆ
ಸ್ಥಳ: ವಿಶಾಖಪಟ್ಟಣಂ
ನೇರಪ್ರಸಾರ: ಜೀಯೋ ಸಿನಿಮಾ, ಸ್ಪೋರ್ಟ್ಸ್ 18