Connect with us

Hi, what are you looking for?

ಕರಾವಳಿ

ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ ನಾಳೆ ಕಾಂತಾರ ಚಲನಚಿತ್ರ ವೀಕ್ಷಿಸಲಿದ್ದಾರೆ ಸಚಿವ ಕೋಟ

4

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು ಕುಂದಾಪುರ ಭಾಗದ ದೈವ ನರ್ತಕರು, ದರ್ಶನ ಪಾತ್ರಿಗಳ ಸಹಿತ, ದೈವದ ಸೇವೆ ಮಾಡುವ ಸಮಾಜ ಮತ್ತು ವ್ಯಕ್ತಿಗಳೊಂದಿಗೆ ಸಿನಿಮಾ ವೀಕ್ಷಿಸುವುದಾಗಿ ಸಚಿವರು ತಿಳಿಸಿದ್ದಾರೆ.

Advertisement. Scroll to continue reading.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಾನು ಕುಂದಾಪುರ ಕೋಟೇಶ್ವರದ ಭಾರತ್ ಸಿನಿಮಾ ಮಂದಿರದಲ್ಲಿ ದೈವ ನರ್ತಕರು, ದರ್ಶನ ಪಾತ್ರಿಗಳು ಮತ್ತು ಸೇವೆ ಮಾಡುವವರ ಜೊತೆಗೆ ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈಗಾಗಲೇ ಸಿನಿಮಾ ಮಂದಿರದಲ್ಲಿ ನೂರಕ್ಕೂ ಅಧಿಕ ಟಿಕೆಟನ್ನು ಸಚಿವರ ಹೆಸರಿನಲ್ಲಿ ಕಾಯ್ದಿರಿಸಲಾಗಿದ್ದು, ಖುದ್ದು ಸಚಿವರೇ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ‌

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!