Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರು ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ದುರಂತ; ಮಂಗಳೂರಿನ ಇಬ್ಬರು ಸಾವು

0

ತುಮಕೂರು : ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕಂಬಳ ನೋಡಲು ಲಕ್ಷಾಂತರ ಜನರು ರಾಜ್ಯದ ವಿವಿಧ ಭಾಗಗಳಿಂದ ಬರುತ್ತಿದ್ದಾರೆ. ಕಂಬಳ ನೋಡಿ ಮಂಗಳೂರಿಗೆ ವಾಪಾಸಾಗುತ್ತಿದ್ದ ಇಬ್ಬರು ವ್ಯಕ್ತಿಗಳು ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ.

ಬೋರ್ವೆಲ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ(20) ಹಾಗೂ ಭಟ್ಟರ ತೋಟದ ಫಿಲಿಪ್ಸ್ ನೇರಿ(32) ಮೃತ ದುರ್ದೈವಿಗಳು.

Advertisement. Scroll to continue reading.

ಬೆಂಗಳೂರಿನಲ್ಲಿ ಕಂಬಳ ನೋಡಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಣಿಗಲ್ ‌ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!