Connect with us

Hi, what are you looking for?

Diksoochi News

ಕ್ರೀಡೆ

ಗುಜರಾತ್ ಟೈಟನ್ಸ್‌ಗೆ ಬೈ ಹೇಳಿ, ಮುಂಬೈ ಇಂಡಿಯನ್ಸ್ ಸೇರಿದ ಹಾರ್ದಿಕ್ ಪಾಂಡ್ಯ

1

ಬೆಂಗಳೂರು : ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅಧಿಕೃತವಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದಾರೆ. ಅವರನ್ನು ಗುಜರಾತ್ ಟೈಟನ್ಸ್ ತಂಡ ಐಪಿಎಲ್ 2024 ಟೂರ್ನಿಗೆ ಪ್ರಕಟ ಮಾಡಿದ ಉಳಿಸಿಕೊಂಡ ಆಟಗಾರರ ಪಟ್ಟಿಯಲ್ಲಿ ಸೇರಿಸಿತ್ತು.

ಆದರೆ, ಇದಾದ ಬಳಿಕ ಅಚ್ಚರಿಯ ಬೆಳವಣಿಗೆ ಎಂಬಂತೆ ಟ್ರೇಡಿಂಗ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್ ಸೇರಿದ್ದಾರೆ. ಹಾರ್ದಿಕ್ ಸಲುವಾಗಿ ಟೈಟನ್ಸ್ ತಂಡಕ್ಕೆ ಮುಂಬೈ ಇಂಡಿಯನ್ಸ್ 15 ಕೋಟಿ ರೂ. ನೀಡಲಿದೆ ಎಂದು ಕ್ರಿಕ್‍ಬಝ್ ವರದಿ ಮಾಡಿದೆ.

ಗುಜರಾತ್ ಟೈಟನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಹೊರಬಂದಿರುವ ಕಾರಣದಿಂದ ಶುಭಮನ್ ಗಿಲ್ ತಂಡದ ಕ್ಯಾಪ್ಟನ್ ಆಗುವ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಾನು ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಿದ ಬಳಿಕ ತನ್ನ ಖಾತೆಯಲ್ಲಿ 15.25 ಕೋಟಿ ರೂ. ಮಾತ್ರವೇ ಹೊಂದಿತ್ತು. ಈಗ ಹಾರ್ದಿಕ್ ಪಾಂಡ್ಯ ಖರೀದಿ ಸಲುವಾಗಿ ತನ್ನ ಸ್ಟಾರ್ ಆಲ್‍ರೌಂಡರ್ ಕ್ಯಾಮೆರಾನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾರಾಟ ಮಾಡಿ ಪರ್ಸ್ ಮೊತ್ತ ಹೆಚ್ಚಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ ಎನ್ನಲಾಗಿದೆ.

Advertisement. Scroll to continue reading.

ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ಈ ಸಲುವಾಗಿ ಉಳಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಲು ನವೆಂಬರ್ 26 ಅಂತಿಮ ದಿನವಾಗಿತ್ತು. ಆದರೂ, ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಇರುವ ಟ್ರೇಡಿಂಗ್ ವಿಂಡೋ ಡಿಸೆಂಬರ್ 12ರವರೆಗೆ ತೆರೆದಿರಲಿದೆ. ಹೀಗಾಗಿ ಉಳಿಸಿಕೊಂಡ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲಾ ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸುವ ಡೀಲ್ ಮುಗಿಸಲಾಗಿದೆ.

ಐಪಿಎಲ್ 2014 ಟೂರ್ನಿಯಿಂದ 2021ರ ಆವೃತ್ತಿವರೆಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡಿ 5 ಬಾರಿ ಟ್ರೋಫಿ ಗೆದ್ದಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಬಳಿಕ ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ಸೇರಿದ್ದರು. ಐಪಿಎಲ್ 2022 ಟೂರ್ನಿಯಲ್ಲಿ ಮೊದಲ ಪ್ರಯತ್ನದಲ್ಲೇ ಟೈಟನ್ಸ್‍ಗೆ ಟ್ರೋಫಿ ಗೆದ್ದುಕೊಟ್ಟರು. ಐಪಿಎಲ್ 2023 ಟೂರ್ನಿಯಲ್ಲೂ ಫೈನಲ್‍ಗೆ ಮುನ್ನಡೆಸಿದರಾದರೂ, ಸಿಎಸ್‍ಕೆ ಎದುರು ನಿರಾಶೆ ಅನುಭವಿಸಿದರು.

ಹಾರ್ದಿಕ್ ಪಾಂಡ್ಯ ಈ ಮೂಲಕ ಐಪಿಎಲ್ ಟ್ರೇಡಿಂಗ್ ವಿಂಡೋ ಮೂಲಕ ಬೇರೆ ತಂಡ ಸೇರಿದ 3ನೇ ಕ್ಯಾಪ್ಟನ್ ಆಗಿದ್ದಾರೆ. ಐಪಿಎಲ್ 2020 ಟೂರ್ನಿ ವೇಳೆ ರವಿಚಂದ್ರನ್ ಅಶ್ವಿನ್ ಮತ್ತು ಅಜಿಂಕ್ಯ ರಹಾನೆ ಬೇರೆ ತಂಡಗಳನ್ನು ಸೇರಿದ ಕ್ಯಾಪ್ಟನ್‍ಗಳಾಗಿದ್ದರು.

ವರದಿಗಳ ಪ್ರಕಾರ ಗುಜರಾತ್ ಟೈಟನ್ಸ್ ಜೊತೆಗಿನ ಮಾತುಕತೆಯಲ್ಲಿ ಅಸಮಾಧಾನಗೊಂಡ ಕಾರಣ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬರುವ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ, ಮುಂಬೈ ಫ್ರಾಂಚೈಸಿ ಭವಿಷ್ಯದ ನಾಯಕನ ಹುಡುಕಾಟದಲ್ಲಿದ್ದು, ಹಾರ್ದಿಕ್ ಪಾಂಡ್ಯಗೆ ಮನ್ನಣೆ ನೀಡಿದಂತ್ತಿದೆ.

Advertisement. Scroll to continue reading.

ಬರೋಬ್ಬರಿ 17.5 ಕೋಟಿ ರೂ.ಗಳ ಭಾರಿ ಬೆಲೆಗೆ ಮುಂಬೈ ಇಂಡಿಯನ್ಸ್ ಸೇರಿದ್ದ ಆಸ್ಟ್ರೇಲಿಯಾದ ಸ್ಟಾರ್ ಆಲ್‍ರೌಂಡರ್ ಅವರನ್ನು ಆರ್‍ಸಿಬಿ ತಂಡಕ್ಕೆ ಬಿಟ್ಟುಕೊಡುವ ಸಾಧ್ಯತೆ ಇದೆ. ಮುಂಬೈ ತಂಡ ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸಲು ಬೇಕಿರುವ 15 ಕೋಟಿ ರೂ. ಹೊಂದಿರುವ ಸಲುವಾಗಿ ತನ್ನ ಸ್ಟಾರ್ ಆಲ್‍ರೌಂಡರ್‍ನ ಆರ್‍ಸಿಬಿಗೆ ಮಾರಾಟ ಮಾಡಲು ಲೆಕ್ಕಾಚಾರ ಮಾಡಿದೆ.

ಉಳಿಸಿಕೊಂಡ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಆರ್‍ಸಿಬಿ ಖಾತೆಯಲ್ಲಿ 40.5 ಕೋಟಿ ರೂ.ಗಳಿದ್ದು, 17.5 ಕೋಟಿಗೆ ಗ್ರೀನ್‍ನ ಖರೀದಿ ಮಾಡುವ ಸಾಮಥ್ರ್ಯ ಹೊಂದಿದೆ. ಐಪಿಎಲ್ 2023 ಟೂರ್ನಿಯಲ್ಲಿ ಗ್ರೀನ್ ಆಡಿದ 16 ಪಂದ್ಯಗಳಿಂದ 50.22ರ ಸರಾಸರಿಯಲ್ಲಿ ಮನಮೋಹಕ 160.28ರ ಸ್ಟ್ರೈಕ್‍ರೇಟ್‍ನೊಂದಿಗೆ 452 ರನ್ ಬಾರಿಸಿದ್ದರು. ಇದರಲ್ಲಿ 1 ಶತಕ ಮತ್ತು 2 ಅರ್ಧಶತಕಗಳಿದ್ದವು. ಬೌಲಿಂಗ್‍ನಲ್ಲೂ 6 ವಿಕೆಟ್ ಪಡೆದಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!