Connect with us

Hi, what are you looking for?

Diksoochi News

ಸಿನಿಮಾ

ಕೂಡಿಬಂತು ಮಳೆ ಹುಡುಗಿಗೆ ಕಂಕಣಭಾಗ್ಯ; ಪ್ರೀತಿಸಿದ ಹುಡುಗನ ಕೈ ಹಿಡಿಯಲಿದ್ದಾರೆ ಪೂಜಾ ಗಾಂಧಿ

2

ಚಂದನವನ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ನಾಳೆ(ನ.29) ಹಸೆಮಣೆ ಏರುತ್ತಿದ್ದಾರೆ. ಕನ್ನಡ ಚಿತ್ರಗಳಲ್ಲಿ ನಟಿಸುವರೊಂದಿಗೆ ಕನ್ನಡವನ್ನು ಕಲಿತು ಕನ್ನಡಿಗರ ಹೃದಯ ಗೆದ್ದಿರುವ ನಟಿ ಪೂಜಾ ಗಾಂಧಿ. ಒಂದು ಸಮಯದಲ್ಲಿ ಕನ್ನಡದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದ ನಟಿ ಬಳಿಕ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ ಆಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಓನರ್ ವಿಜಯ್ ಎಂಬುವರ ಜೊತೆ ಬೆಂಗಳೂರಿನ ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾಗಲಿದ್ದಾರೆ. ಈ ವಿಷಯವನ್ನು ಸ್ವತಃ ಪೂಜಾ ಗಾಂಧಿಯವರೇ ಪತ್ರದ ಮೂಲಕ ಬಹಿರಂಗ ಪಡಿಸಿದ್ದಾರೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ. ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ.

ಪೂಜಾ ಗಾಂಧಿ ಮೂಲತಃ ಬೆಂಗಾಲಿ ಕುಟುಂಬದವರು. ಹುಟ್ಟಿದ್ದು ಉತ್ತರ ಪ್ರದೇಶದ ಮೀರತ್ ನಲ್ಲಿ. ‘ಮುಂಗಾರು ಮಳೆ’ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಸಂಜನಾ ಗಾಂಧಿ ಬಳಿಕ ಪೂಜಾ ಗಾಂಧಿ ಎಂದು ಹೆಸರು ಬದಲಿಸಿಕೊಂಡರು, ಕನ್ನಡ ಮಾತ್ರವಲ್ಲದೆ, ಮಲಯಾಳಂ, ಬೆಂಗಾಲಿ ಸಿನಿಮಾರಂಗಗಳಲ್ಲಿ ನಟಿ ಪೂಜಾ ಗಾಂಧಿ ನಟಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!